Home › ಸುಲ್ಕೇರಿಮೊಗ್ರು ಪ್ರಾಥಮಿಕ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಿತ್ಯಾನಂದ ಶೆಟ್ಟಿ ಅವರಿಗೆ ಬೀಳ್ಕೊಡುಗೆ
ಸುಲ್ಕೇರಿಮೊಗ್ರು ಪ್ರಾಥಮಿಕ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಿತ್ಯಾನಂದ ಶೆಟ್ಟಿ ಅವರಿಗೆ ಬೀಳ್ಕೊಡುಗೆ
ONLINE PUDU / Monday, October 26, 2020
ಅಳದಂಗಡಿ: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಭಾ ಕಾರ್ಯಕ್ರಮ ಅಳದಂಗಡಿ ಶ್ರೀ ಗುರು ಸಭಾಭವನದಲ್ಲಿ ನಡೆಯಿತು.ಸಂಘದಲ್ಲಿ ಕಳೆದ 31 ವರುಷಗಳಿಂದ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಪಿ.ಹೆಚ್. ನಿತ್ಯಾನಂದ ಶೆಟ್ಟಿ ನೊಚ್ಚ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ನಡೆಯಿತು. ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.
ಅಳದಂಗಡಿಯ ತಿಮ್ಮಣ್ಣ ಅರಸರಾದ ಡಾ. ಪದ್ಮಪ್ರಸಾದ ಅಜಿಲ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರುಗಳಾದ ಕೆ. ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.