ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಡಿ.22, 27ರಂದು ಗ್ರಾಮ ಪಂಚಾಯತಿ ಚುನಾವಣೆ: ಇಂದಿನಿಂದಲೇ ನೀತಿಸಂಹಿತೆ ಜಾರಿ

ಡಿ.22, 27ರಂದು ಗ್ರಾಮ ಪಂಚಾಯತಿ ಚುನಾವಣೆ: ಇಂದಿನಿಂದಲೇ ನೀತಿಸಂಹಿತೆ ಜಾರಿ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಸೋಮವಾರ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಿದ್ದು, ಎರಡು ಹಂತಗಳಲ್ಲಿ ಚುನಾವಣಾ ಪ್ರಕ್ರಿಯೆ ನಡೆಸಲಿದೆ. ನ.30ರಿಂದಲೇ ನೀತಿಸಂಹಿತೆ ಜಾರಿಯಾಗಲಿದೆ.

ಮೊದಲ ಹಂತದ ಮತದಾನ ಡಿ. 22ರಂದು ಹಾಗೂ ಎರಡನೇ ಹಂತದ ಚುನಾವಣೆ ಡಿ.27ಕ್ಕೆ ನಡೆಯಲಿದೆ. ನೀತಿ ಸಂಹಿತೆ ಡಿ.31ರವರೆಗೂ ಜಾರಿಯಲ್ಲಿರಲಿದೆ. ಸುಮಾರು 5,800 ಗ್ರಾಮ ಪಂಚಾಯಿತಿಗಳ 85,000 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ರಾಜಕೀಯ ಪಕ್ಷಗಳಿಗೆ ಸ್ಥಳೀಯ ಮಟ್ಟದಲ್ಲಿ ತಮ್ಮ ಪ್ರಭಾವವನ್ನು ಪ್ರದರ್ಶಿಸಲು ವೇದಿಕೆಯಾಗಲಿದೆ. ರಾಜ್ಯ ಚುನಾವಣಾ ಆಯೋಗ ಬೆಳಗ್ಗೆ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಿದೆ. ಈ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ತಂದಿದ್ದು, ಹೊಸ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ಇನ್ನು ಮಾಡುವಂತಿಲ್ಲ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!