Home › ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ: ಚಳಿಗಾಲದ ಅಧಿವೇಶನದಲ್ಲಿ ಅಧಿಕೃತ ಘೋಷಣೆ ಸಾಧ್ಯತೆ
ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ: ಚಳಿಗಾಲದ ಅಧಿವೇಶನದಲ್ಲಿ ಅಧಿಕೃತ ಘೋಷಣೆ ಸಾಧ್ಯತೆ
ONLINE PUDU / Wednesday, November 18, 2020
ಬೆಳ್ತಂಗಡಿ: ರಾಜ್ಯದಲ್ಲಿ ಹೊಸ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ, ಮುಂದಿನ ಸಂಪುಟ ಸಭೆಯಲ್ಲಿ ಅಧಿಕೃತ ಘೋಷಣೆ ನಡೆಯಲಿದೆ ಎಂದು ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆಯಾಗಿ ಅಧಿಕೃತ ಘೋಷಣೆ ಮಾಡಲಾಗುವುದು. ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ. ವಿಜಯನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬ ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸರ್ಕಾರ ಕೊನೆಗೂ ಅಸ್ತು ಎಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿದ್ಯುಕ್ತವಾಗಿ ಘೋಷಣೆಯಾಗಲಿದೆ ಎಂದರು.
ಈ ಮೂಲಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಅಸ್ತಿತ್ವಕ್ಕೆ ಬರುವುದು ಬಹುತೇಕ ಖಚಿತವಾಗಿದೆ.