ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 'ವಾತ್ಸಲ್ಯ' ಯೋಜನೆ, ವಾತ್ಸಲ್ಯ ಕಿಟ್ ಸಾಗಿಸುವ ಟ್ರಕ್‍ಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಉದ್ಘಾಟನೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 73ನೇ ಹುಟುಹಬ್ಬದ ಸಂಭ್ರಮ

'ವಾತ್ಸಲ್ಯ' ಯೋಜನೆ, ವಾತ್ಸಲ್ಯ ಕಿಟ್ ಸಾಗಿಸುವ ಟ್ರಕ್‍ಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಉದ್ಘಾಟನೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 73ನೇ ಹುಟುಹಬ್ಬದ ಸಂಭ್ರಮ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿರುವ ಸಮಾಜ ಬಾಂಧವರಿಗೆ ಸಹಾಯ ಹಸ್ತ ನೀಡುವ 'ವಾತ್ಸಲ್ಯ' ಯೋಜನೆಯ ವಾತ್ಸಲ್ಯ ಕಿಟ್ ಸಾಗಿಸುವ ಟ್ರಕ್‍ಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವೀ. ಹೆಗ್ಗಡೆಯವರು ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ 73ನೇ ಹುಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ನಾಡಿನ ಗಣ್ಯರು, ಅಭಿಮಾನಿಗಳು, ಕುಟುಂಬಸ್ಥರು, ಆಪ್ತರು, ಭಕ್ತರು ಶುಭಾಶಯ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಡಾ. ಎಲ್. ಹೆಚ್. ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಎಸ್.ಡಿ.ಎಂ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಬಿ. ಯಶೋವರ್ಮ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ವಿ. ರಾಮಸ್ವಾಮಿ, ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯ್ಸ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!