ಬಿಹಾರದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಎನ್.ಡಿ.ಎ ಮೈತ್ರಿಕೂಟದೊಳಗೆ ಬಿಜೆಪಿ ಅತೀ ಹೆಚ್ಚು ಸ್ಥಾನ ಗಳಿಸುವ ಮೂಲಕ ಮುನ್ನಡೆ ಸಾಧಿಸಿರುವುದೆ ಇದೂ ಬಿ.ಜೆ.ಪಿ. ಕಾರ್ಯಕರ್ತರ ಸಂಭ್ರಮ ಹೆಚ್ಚಿಸಿತು. ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಮಂಡಲ ಉಪಾಧ್ಯಕ್ಷ ಸೀತಾರಾಮಬೆಳಾಲು, ಮಂಡಲ ಕಾರ್ಯದರ್ಶಿ ಪ್ರಶಾಂತ್ ಎಂ.ಪಾರೆಂಕಿ, ಪಟ್ಟಣ ಪಂಚಾಯಿತಿ ಸದಸ್ಯ ಶರತ್ ಕುಮಾರ್, ಪ.ಪಂ. ಸದಸ್ಯರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಈ ಸಂದರ್ಭ ಪಟಾಕಿ ಸಿಡಿಸಿ ಸಂಭ್ರಮಿಸಿ, ಬಳಿಕ ಜನಪ್ರತಿನಿಧಿಗಳೇ ಪಟಾಕಿ ಕಸವನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.