ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಲ್ ಜೀವನ್ ಮಿಷನ್: ಸ್ವ-ಸಹಾಯ ಸಂಘಗಳ ಜಾಥಾ

ಜಲ್ ಜೀವನ್ ಮಿಷನ್: ಸ್ವ-ಸಹಾಯ ಸಂಘಗಳ ಜಾಥಾ

ನಾರಾವಿ: ಜಲ್ ಜೀವನ್ ಮಿಷನ್ ಸ್ವಸಹಾಯ ಸಂಘಗಳ ಜಾಥಾ ನಾರಾವಿ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು. ಜಲ್ ಜೀವನ್ ಮಿಷನ್ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ಜಿ.ಪಂ. ನೈರ್ಮಲ್ಯ ವಿಭಾಗ, ಬೆಳ್ತಂಗಡಿ ತಾಲೂಕು ಪಂಚಾಯತ್, ನಾರಾವಿ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಸಮುದಾಯ ಸಂಸ್ಥೆ ತುಮಕೂರು ಇವರ ಸಂಯೋಜನೆಯಲ್ಲಿ ಜಲ ಜೀವನ್ ಮಿಷನ್ ಇದರ ಶಿಕ್ಷಣ ಮಾಹಿತಿ ಸಂಪರ್ಕ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮ ವಿಭಾಗದ ಜಲಜೀವನ್ ಕಾರ್ಯಕ್ರಮದಡಿಯಲ್ಲಿ ಸ್ವ ಸಹಾಯ ಸಂಘಗಳ ಜಾಥಾ ಪಂಚಾಯತ್ ಅವರಣದಲ್ಲಿ ಆಯೋಜಿಸಲಾಯಿತು.

ಜಿಲ್ಲಾ ಜಲಜೀವನ್ ಐಇಸಿ ಹೆಚ್ ಆರ್.ಡಿ. ವಿಭಾಗದ ಮುಖ್ಯಸ್ಥರಾದ ಶಿವರಾಮ್ ಪಿ.ಬಿ. ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಪಂಚಾಯತ್ ಆಡಳಿತಾಧಿಕಾರಿ ಸಿ. ಎಚ್. ಶಿವ ಶಂಕರ್ ವಹಿಸಿದರು ಪಂ. ಅಭಿವೃದ್ಧಿ ಅಧಿಕಾರಿ ರವಿ ಎಂ. ಎಸ್. ಹಾಗೂ ಪಂ. ಸಿಬ್ಬಂದಿಗಳು ಆಶಾ ಕಾರ್ಯಕರ್ತರು ಅಂಗನವಾಡಿ , ಇಲಾಖಾ ಸಿಬ್ಬಂದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು. ಪಂ. ಕಾರ್ಯದರ್ಶಿ ನಿರ್ಮಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!