ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ: ಓರ್ವ ಸವಾರ ಸಾವು: ಮತ್ತೋರ್ವ ಆಸ್ಪತ್ರೆಗೆ ದಾಖಲು

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ: ಓರ್ವ ಸವಾರ ಸಾವು: ಮತ್ತೋರ್ವ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ನಡ ಗ್ರಾಮದ ಕೆಳಗಿನ ಮಂಜೊಟ್ಟಿ ಎಂಬಲ್ಲಿ ಡಿ.21 ಸೋಮವಾರ ರಾತ್ರಿ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ಸವಾರ ಮೃತಪಟ್ಟ ಘಟನೆ ನಡೆದಿದೆ.

ಒಂದು‌ ದ್ವಿಚಕ್ರ ವಾಹನದಲ್ಲಿ ನಾವೂರು ನಿವಾಸಿ ಪ್ರತಿಶಾ(22) ಅವರು ಲಾಯಿಲ ಕಡೆಯಿಂದ ಕಿಲ್ಲೂರು ಕಡೆಗೆ ಹೋಗುತ್ತಿದ್ದರು. ಈ ಸಂದರ್ಭ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ನಡ ಗ್ರಾಮದ ಕೆಳಗಿನ ಮಂಜೊಟ್ಟಿ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಅಂದರೆ ಕಿಲ್ಲೂರು ಕಡೆಯಿಂದ ಮಲವಂತಿಗೆ ನಿವಾಸಿ ಗೋಪಾಲಕೃಷ್ಣ (18) ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಬಂದಿದ್ದಾರೆ. ಈ ಎರಡೂ ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಗಾಯಗೊಂಡಿದ್ದ ‌ಸವಾರರಿಬ್ಬರನ್ನೂ‌ ಆಸ್ಪತ್ರೆಗೆ ದಾಖಲಿಸುವ ಯತ್ನ ಮಾಡಲಾಗಿದೆ.

ಪ್ರತಿಶಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗೋಪಾಲಕೃಷ್ಣ ಅವರನ್ನು ಚಿಕಿತ್ಸೆಗಾಗಿ‌ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!