ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಡಿರುದ್ಯಾವರ: ಕಾಂಗ್ರೆಸ್ ಸೇರಿದ ಬಿಜೆಪಿ ಸದಸ್ಯರು:

ಕಡಿರುದ್ಯಾವರ: ಕಾಂಗ್ರೆಸ್ ಸೇರಿದ ಬಿಜೆಪಿ ಸದಸ್ಯರು:

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಮುಖಂಡ ನೇಮಣ್ಣ ಗೌಡ, ನಾರಾಯಣ ಗೌಡ ಬರೆ, ಕೊರಗಪ್ಪ ಗೌಡ ಅಂತರ ಮೊದಲಾದ ಪ್ರಮುಖರು ರವಿವಾರ ಬೆಳ್ತಂಗಡಿಯ ಮಾಜಿ‌ ಶಾಸಕ ವಸಂತ ಬಂಗೇರ ಅವರ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಾಜಿ ಶಾಸಕ ವಸಂತ ಬಂಗೇರ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಈ‌ ಸಂದರ್ಭ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಅಧ್ಯಕ್ಷ ರಂಜನ್ ಗೌಡ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಿತ್ ಜೈನ್, ಗ್ರಾಮ ಸಮಿತಿ ಅಧ್ಯಕ್ಷ ಲಿಜೋ ಕಡಿರುದ್ಯಾವರ, ಗ್ರಾ.ಪಂ ಮಾಜಿ ಸದಸ್ಯ ನೇಮಿರಾಜ್, ಮಾಜಿ ಉಪಾಧ್ಯಕ್ಷ ಸಂತೋಷ್ ಗೌಡ ವಳಂಬ್ರ, ಪ್ರಮುಖರಾದ ನಾಗರಾಜ್ ಲ್ಯಾಲ, ಪೌಲೋಸ್ ನೂಜಿ, ರಮೇಶ್ ಗೌಡ, ರಾಜಗೋಪಾಲ್, ಮಹೇಶ್ ಗೌಡ ಕೌಡಂಗೆ ಇವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!