ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಸಾವು: ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿ ಮ್ಯಾಕ್ಸಿಂ ಮಾಡ್ತಾ ಮೃತ್ಯು

ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಸಾವು: ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿ ಮ್ಯಾಕ್ಸಿಂ ಮಾಡ್ತಾ ಮೃತ್ಯು

ಬೆಳ್ತಂಗಡಿ: ಪಕ್ಕದ ಮನೆಯ ಪಂಪ್ ಸೆಟ್ ಪರಿಶೀಲನೆ ಸಂದರ್ಭ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದ ಪರಿಣಾಮ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ಬಳಿ ನಡೆದಿದೆ. ಡಿ.1ರಂದು ಬೆಳಗ್ಗೆ ಸುಮಾರು 6 ಗಂಟೆ ಸುಮಾರಿಗೆ ಚರ್ಚ್ ರೋಡ್ ನಿವಾಸಿ ಸ್ಥಳೀಯವಾಗಿ ಗ್ಯಾರೇಜ್ ಹೊಂದಿರುವ ಮ್ಯಾಕ್ಸಿಂ ಮಾಡ್ತಾ(53) ಅವರು ಮನೆಯ ಹತ್ತಿರದ, ಅವರ ಸಂಬಂಧಿ ಜೊರೋ ಜೆರಾಲ್ಡ್ ಮೊನೀಸ್ ಎಂಬವರ ಮನೆಯ ಹಿಂಬದಿಯಲ್ಲಿರುವ ಬಾವಿ ಕಟ್ಟೆಗೆ ಅಳವಡಿಸಿದ ಪಂಪ್ ಸೆಟ್ ಪರಿಶೀಲಿಸಲು ತೆರಳಿದ್ದಾರೆ. ಈ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರ ಪುತ್ರ ದೂರು ನೀಡಿದ್ದು, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!