ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜ.31ರಂದು ಉಜಿರೆಯಲ್ಲಿ ಬಿ.ಜೆ.ಪಿ. ಅಭಿನಂದನಾ ಸಮಾರಂಭ: ಸಚಿವ ಈಶ್ವರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉಪಸ್ಥಿತಿ

ಜ.31ರಂದು ಉಜಿರೆಯಲ್ಲಿ ಬಿ.ಜೆ.ಪಿ. ಅಭಿನಂದನಾ ಸಮಾರಂಭ: ಸಚಿವ ಈಶ್ವರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉಪಸ್ಥಿತಿ

[embedyt] https://www.youtube.com/watch?v=gPsA7eEkKVc[/embedyt]

 

ಉಜಿರೆ: ಜ.31ರಂದು‌ ಮಧ್ಯಾಹ್ನ ಉಜಿರೆಯಲ್ಲಿ ಬಿ.ಜೆ.ಪಿ. ಅಭಿನಂದನಾ ಸಮಾರಂಭ ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ‌ ಭಾಗವಹಿಸಲಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

ಅವರು ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಪೂರ್ವಸಿದ್ಧತೆ ಪರಿಶೀಲಿಸಿ ಮಾತನಾಡಿದರು. ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದ್ದು, ಗ್ರಾ.ಪಂ. ಚುನಾವಣೆ ವಿಜೇತರು, ಸ್ಪರ್ಧಿಗಳು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಹಮ್ಮಿಕೊಳ್ಳಲಾಗಿದೆ, ಜೊತೆಗೆ ಮುಂಬರುವ ತಾ.ಪಂ., ಜಿ.ಪಂ. ಚುನಾವಣೆಗೆ‌ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಲು ಸಭೆ ನಡೆಯಲಿದೆ‌ ಎಂದರು.

ಉಜಿರೆ ‌ಶ್ರೀ ಜನಾರ್ದನ ದೇಗುಲದಿಂದ ಸಭಾ ಕಾರ್ಯಕ್ರಮ‌ ನಡೆಯುವ ಸ್ಥಳಕ್ಕೆ ಬೃಹತ್ ಮೆರಣಿಗೆ ನಡೆಯಲಿದೆ‌. ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದೆ. ಉಜಿರೆ ಶ್ರೀರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಪೂರ್ವತಯಾರಿ ನಡೆಯುತ್ತಿದೆ ಎಂದು ಪ್ರಜಾಪ್ರಕಾಶಕ್ಕೆ ಮಾಹಿತಿ ‌ನೀಡಿದರು.

ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಚಿವ ಅಂಗಾರ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ‌ನೀಡಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!