ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಪತ್ರಕರ್ತರ ಸಂಘ: ಅಪಹರಣ ಪ್ರಕರಣ ಸುಖಾಂತ್ಯಗೊಳಿಸಿದ ತಾಲೂಕಿನ ಪೊಲೀಸ್ ತಂಡಕ್ಕೆ ಗೌರವಾರ್ಪಣೆ

ಬೆಳ್ತಂಗಡಿ ಪತ್ರಕರ್ತರ ಸಂಘ: ಅಪಹರಣ ಪ್ರಕರಣ ಸುಖಾಂತ್ಯಗೊಳಿಸಿದ ತಾಲೂಕಿನ ಪೊಲೀಸ್ ತಂಡಕ್ಕೆ ಗೌರವಾರ್ಪಣೆ

ಬೆಳ್ತಂಗಡಿ: ಉಜಿರೆಯ ಮಗು ಅಪಹರಣ ಪ್ರಕರಣವನ್ನು ಬೇಧಿಸಿ, ಸುಖಾಂತ್ಯಗೊಳಿಸಿದ ಪೊಲೀಸ್ ಇಲಾಖೆಯ ತಂಡದ ಪರವಾಗಿ ಬೆಳ್ತಂಗಡಿ ತಾಲೂಕಿನ ಪೊಲೀಸ್ ಅಧಿಕಾರಿಗಳನ್ನು ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಶನಿವಾರ ಸಂಘದ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಲಕ್ಷ್ಮೀ ಪ್ರಸಾದ್ ಮಾರ್ಗದರ್ಶನದಲ್ಲಿ ಕಾರ್ಯಾಚರಿಸಿದ ಬೆಳ್ತಂಗಡಿ ತಾಲೂಕಿನ ಪೊಲೀಸ್ ಇಲಾಖೆಯ ತಂಡದ ಪರವಾಗಿ ಉಜಿರೆ ಪ್ರಕರಣದ ತನಿಖಾಧಿಕಾರಿ, ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಬೆಳ್ತಂಗಡಿ ಉಪ ನಿರೀಕ್ಷಕ ನಂದ ಕುಮಾರ್, ಧರ್ಮಸ್ಥಳ ಉಪ ನಿರೀಕ್ಷಕ ಪವನ್ ನಾಯ್ಕ್, ಬೆಳ್ತಂಗಡಿ ಸಂಚಾರಿ ಉಪ ನಿರೀಕ್ಷಕ ಕುಮಾರ್ ಕಾಂಬ್ಳೆ ಅವರನ್ನು ಅಭಿನಂದಿಸಲಾಯಿತು.‌

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಜಿರೆ ಪ್ರಕರಣದಲ್ಲಿ‌ಜಿಲ್ಲಾ ಎಸ್ಪಿಯವರ ಮಾರ್ಗದರ್ಶನದಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದರಿಂದ ಅಪಹರಣಗೊಂಡ ಮಗುವನ್ನು ರಕ್ಷಿಸಲು ಸಾಧ್ಯವಾಗಿದೆ. ತನಿಖೆಗೆ ಪೂರಕವಾಗಿ ಯಾವುದೇ ಸಮಸ್ಯೆಯಾಗದಂತೆ ಬೆಳ್ತಂಗಡಿ ತಾಲೂಕಿನ ಮಾಧ್ಯಮ ಸ್ನೇಹಿತರು ಸಹಕರಿಸಿದ್ದಾರೆ. ನಮ್ಮ‌ ಕರ್ತವ್ಯವನ್ನು ಗುರುತಿಸಿ, ಗೌರವಿಸಿರುವುದು ನಮ್ಮ ಸೇವಾ ಬದ್ದತೆಗೆ ಸಂದ ಗೌರವವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ಅವರು, ಬೆಳ್ತಂಗಡಿ ತಾಲೂಕಿನ ಪೊಲೀಸ್ ವೃತ್ತ ಹಾಗೂ ಬೆಳ್ತಂಗಡಿ, ಧರ್ಮಸ್ಥಳ, ವೇಣೂರು, ಪುಂಜಾಲಕಟ್ಟೆ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರವನ್ನು ಸ್ಮರಿಸಿ, ಅಭಿನಂದಿಸಿದರು.

ಉದ್ಯಮಿ ರಾಜೇಶ್ ಪೈ ಉಜಿರೆ, ಸಿರಿ ಗ್ರಾಮೋದ್ಯೋಗ ಆಡಳಿತ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಉಪಾಧ್ಯಕ್ಷ ದೀಪಕ್ ಅಟವಳೆ, ಜತೆ ಕಾರ್ಯದರ್ಶಿ ಗುರುಮೂರ್ತಿ ಶಗ್ರಿತ್ತಾಯ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು. ಸಂಘದ ಕೋಶಾಧಿಕಾರಿ ಚೈತ್ರೇಶ್ ಇಳಂತಿಲ ಸ್ವಾಗತಿಸಿದರು. ಕಾರ್ಯದರ್ಶಿ ಮನೋಹರ್ ಬಳಂಜ ಕಾರ್ಯಕ್ರಮ ನಿರ್ವಹಿಸಿ, ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ವಂದಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!