ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಾಲೂಕು ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ಸವಣಾಲು ಅವಿರೋಧ ಆಯ್ಕೆ

ತಾಲೂಕು ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ಸವಣಾಲು ಅವಿರೋಧ ಆಯ್ಕೆ

ಬೆಳ್ತಂಗಡಿ: ತಾಲೂಕು ಅಡಿಕೆ ವರ್ತಕರ ಸಂಘದ ಸಭೆ ಹಾಗೂ ಪದಾಧಿಕಾರಿಗಳ ನೇಮಕ ಸಭೆ ಗುರುವಾಯಕೆರೆ ಬಂಟರ ಬವನ ದಲ್ಲಿ ನಡೆಯಿತು.

ತಾಲೂಕು ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ಸವಣಾಲು ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ, ಪುರೋಷತ್ತಮ್, ಹಮೀದ್, ಜಮಾಲ್ ಅವಿರೋಧವಾಗಿ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಸಂಶುದ್ದೀನ್ ಗೇರುಕಟ್ಟೆ, ಕಾರ್ಯದರ್ಶಿಯಾಗಿ ಜಗದೀಶ್ ಮತ್ತು ಸತೀಶ್ ರೈ, ಕೋಶಾಧಿಕಾರಿಯಾಗಿ ಹೇಮಶಂಕರ್ ಶೆಟ್ಟಿ, ಮಾಧ್ಯಮ ಮತ್ತು ಪ್ರಚಾರ ಪ್ರಮುಖರಾಗಿ ಸುದೀಪ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಪದ್ಮರಾಜ್ ಜೈನ್, ಬಿ. ಹೈದರ್ ಮತ್ತು ಪುಷ್ಪರಾಜ್ ಜೈನ್ ನೇಮಕಗೊಂಡರು.

ನೂತನ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸವಣಾಲು ಮಾತನಾಡಿ, ಹಲವಾರು ರೈತ ಸ್ನೇಹಿ ಕಾರ್ಯಕ್ರಮಗಳನ್ನು ಒಳಗೊಂಡಂತೆ ವರ್ತಕರ ಹಿತಾಸಕ್ತಿ ಕಾಪಾಡಲು ಮುಂಬರುವ ದಿನಗಳಲ್ಲಿ ರೂಪುರೇಷೆ ರಚಿಸಲಾಗುವುದು. ಸರ್ಕಾರ ಮತ್ತು ವಿವಿಧ ಇಲಾಖೆಗಳಿಂದ ವರ್ತಕರ ಶೋಷಣೆ ತಪ್ಪಿಸಲಾಗುವುದು ಎಂದರು.

ತಾಲೂಕಿನ 70ಕ್ಕೂ ಅಧಿಕ ವರ್ತಕರು ಈ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!