ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘ: ಅಧ್ಯಕ್ಷರಾಗಿ ಅಚುಶ್ರೀ ಬಾಂಗೇರು, ಕಾರ್ಯದರ್ಶಿಯಾಗಿ ಜಾರಪ್ಪ ಪೂಜಾರಿ ಬೆಳಾಲು, ಕೋಶಾಧಿಕಾರಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘ: ಅಧ್ಯಕ್ಷರಾಗಿ ಅಚುಶ್ರೀ ಬಾಂಗೇರು, ಕಾರ್ಯದರ್ಶಿಯಾಗಿ ಜಾರಪ್ಪ ಪೂಜಾರಿ ಬೆಳಾಲು, ಕೋಶಾಧಿಕಾರಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಜ.2ರಂದು ಬೆಳ್ತಂಗಡಿ ಪತ್ರಕರ್ತರ ಭವನದಲ್ಲಿ ಜರುಗಿತು. ನೂತನ ಅಧ್ಯಕ್ಷರಾಗಿ ಕರಾವಳಿ ಅಲೆ ವರದಿಗಾರ ಅಚುಶ್ರೀ ಬಾಂಗೇರು, ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಜಾರಪ್ಪ ಪೂಜಾರಿ ಬೆಳಾಲು ಮತ್ತು ಕೋಶಾಧಿಕಾರಿಯಾಗಿ ಪತ್ರಕರ್ತ ಪ್ರಸಾದ್ ಶೆಟ್ಟಿ ಏಣಿಂಜೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಉದಯವಾಣಿ ವೇಣೂರು ವಲಯ ವರದಿಗಾರ ಪದ್ಮಾನಾಭ, ಜೊತೆ ಕಾರ್ಯದರ್ಶಿಯಾಗಿ ಸಂಜೀವ ಎನ್.ಸಿ. ಆಯ್ಕೆಯಾದರು. ಸಮಾರಂಭದ ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞ ವಹಿಸಿದ್ದರು. ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತರ ಆರ್. ಎನ್. ಪೂವಣಿ ಆಯ್ಕೆ ಪ್ರಕ್ರಿಯೆ ನಡೆಸಿದರು.

ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಜಿ. ಸಂಘದ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಮನೋಹರ ಬಳಂಜ ನಿರೂಪಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!