ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಕಿಹಚ್ಚಿಕೊಂಡು ಯುವತಿ ಆತ್ಮಹತ್ಯೆ: ಪೊಲೀಸರಿಂದ ತನಿಖೆ

ಬೆಂಕಿಹಚ್ಚಿಕೊಂಡು ಯುವತಿ ಆತ್ಮಹತ್ಯೆ: ಪೊಲೀಸರಿಂದ ತನಿಖೆ

ನೆಲ್ಯಾಡಿ: ಬೆಂಕಿಹಚ್ಚಿಕೊಂಡು ಯುವತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿ ಬಳಿ ನಡೆದಿದೆ. ನೆಲ್ಯಾಡಿ ನಿವಾಸಿ ವಿ.ಜೆ.ಜೋಸೆಫ್ ಎಂಬವರ ಪುತ್ರಿ ನವ್ಯಾ ಜೋಸೆಫ್ (21ವ.) ಆತ್ಮಹತ್ಯೆ ಮಾಡಿಕೊಂಡವರು. ಜ.3ರಂದು ರಾತ್ರಿ ಸುಮಾರು 10:30ರ ವೇಳೆಗೆ ತನ್ನ ಕೊಠಡಿಗೆ ತೆರಳಿದ್ದರು, ಬಳಿಕ ಜ.4ರಂದು ಬೆಳಗ್ಗೆ 8 ಗಂಟೆವರೆಗೂ ಕೋಣೆಯ ಬಾಗಿಲು ತೆರೆಯದೇ ಇದ್ದ ಹಿನ್ನೆಲೆ ಮನೆಯವರು ನವ್ಯಾ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸಲಿಲ್ಲ. ಬಳಿಕ ಅನುಮಾನಗೊಂಡು ಬಾಗಿಲು ಮುರಿದು ಒಳಪ್ರವೇಶಿಸಿದ ಸಂದರ್ಭ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ನವ್ಯಾ ಅವರು ಕಳೆದ ಶೈಕ್ಷಣಿಕ ಸಾಲಿನಲ್ಲಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮುಗಿಸಿ, ಮನೆಯಲ್ಲಿದ್ದರು‌. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!