ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕರಾವಳಿ‌ ಶಾಸಕರೊಂದಿಗೆ‌ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸಭೆ

ಕರಾವಳಿ‌ ಶಾಸಕರೊಂದಿಗೆ‌ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸಭೆ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ವಿಧಾನಸೌಧದ ಕಛೇರಿಯಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಶುಲ್ಕ ಪಾವತಿ, ಕಟ್ಟಡ ಪರವಾನಿಗೆ, ನಿರ್ಮಾಣ ತಂತ್ರಜ್ಞಾನ, ಅನಧಿಕೃತ ಅಭಿವೃದ್ಧಿ ಅಥವಾ ನಿರ್ಮಾಣದ ಕಟ್ಟಡ ಪರವಾನಿಗೆ ಖಾತಾ ನೀಡಲು ಇರುವ ಸಮಸ್ಯೆ ಹಾಗೂ ಇನ್ನಿತರ ವಿಷಯಗಳ ಕುರಿತು ತೆಗೆದುಕೊಂಡ ಪ್ರಗತಿ ಕ್ರಮಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮೊದಲಾದವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!