ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿಯ ಪ್ರತಿಭೆ ಪ್ರತೀಕ್ಷಾ ಝೀ ಕನ್ನಡ DKDಗೆ ಆಯ್ಕೆ

ಬೆಳ್ತಂಗಡಿಯ ಪ್ರತಿಭೆ ಪ್ರತೀಕ್ಷಾ ಝೀ ಕನ್ನಡ DKDಗೆ ಆಯ್ಕೆ

ಬೆಳ್ತಂಗಡಿ: ತಾಲೂಕಿನ ಲಾಯಿಲಾ ಗ್ರಾಮದ ಪ್ರತೀಕ್ಷಾ ಝೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋನಲ್ಲಿ ಅತ್ಯುತ್ತಮ ನೃತ್ಯ ಪ್ರದರ್ಶನ ನೀಡುವ ಮೂಲಕ ಮುಂದಿನ‌ ಸುತ್ತಿಗೆ ಆಯ್ಕೆಯಾಗಿದ್ದಾರೆ.

ಪ್ರತೀಕ್ಷಾ ಅತ್ಯುತ್ತಮ ನೃತ್ಯ ಪ್ರದರ್ಶನ ನೀಡುವ ಮೂಲಕ ಮಂಗಳೂರು Abbakka Little Champsನ ವಿಜೇತೆಯಾಗಿದ್ದು, ಈ ಬಾರಿ ಡಿ.ಕೆ.ಡಿ.ಯಲ್ಲಿ ತಮ್ಮ ಪ್ರದರ್ಶನದ ಮೂಲಕ ತೀರ್ಪುಗಾರರ ಮನಗೆದ್ದಿದ್ದಾರೆ. ತೀರ್ಪುಗಾರರಾದ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್, ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟ ವಿಜಯ ರಾಘವೇಂದ್ರ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಪ್ರತೀಕ್ಷಾ ನೃತ್ಯ ಪ್ರದರ್ಶನ ಮೆಚ್ಚಿ ಮುಂದಿನ ಸುತ್ತಿಗೆ ಆಯ್ಕೆ ಮಾಡುವ ಜೊತೆಗೆ ಉತ್ತಮ ಪ್ರತಿಕ್ರಿಯೆ ನೀಡಿ ಶುಭಹಾರೈಸಿದ್ದಾರೆ.

ಪ್ರತೀಕ್ಷಾ ಅವರು ಲಾಯಿಲಾ ಬೇಬಿ ಮತ್ತು ಜಿ. ವಿನಯ್ ದಂಪತಿಗಳ ಪುತ್ರಿಯಾಗಿದ್ದು, ಬೀಟ್ ರಾಕರ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯ ನೃತ್ಯ ನಿರ್ದೇಶಕ ಜಿತೇಶ್ ಕುಮಾರ್ ಅವರ ಶಿಷ್ಯಯಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!