ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿತ್ಯನೂತನವಾದ ಸಂಗೀತ ಕಲೆಗೆ ಸಾವಿಲ್ಲ: ಡಾ. ಡಿ. ವೀರೇಂದ್ರ ಹೆಗ್ಗಡೆ: ಧರ್ಮಸ್ಥಳದಲ್ಲಿ, ಯುವ ಕಲಾಮಣಿ -2020 ಪ್ರಶಸ್ತಿ ಪ್ರದಾನ

ನಿತ್ಯನೂತನವಾದ ಸಂಗೀತ ಕಲೆಗೆ ಸಾವಿಲ್ಲ: ಡಾ. ಡಿ. ವೀರೇಂದ್ರ ಹೆಗ್ಗಡೆ: ಧರ್ಮಸ್ಥಳದಲ್ಲಿ, ಯುವ ಕಲಾಮಣಿ -2020 ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸಂಗೀತ, ಸಾಹಿತ್ಯ, ಕಲೆ ಮತ್ತು ಸಂಸ್ಕ್ರತಿಯ ಸಂರಕ್ಷಣೆಗೆ ನಿರಂತರ ಪ್ರೋತ್ಸಾಹ ನೀಡುತ್ತವೆ. ಸಂಗೀತ ದೇವರಿಗೂ, ಭಕ್ತರಿಗೂ ಅತ್ಯಂತ ಪ್ರಿಯವಾಗಿದ್ದು ಎಲ್ಲಾ ದೇವಸ್ಥಾನಗಳಲ್ಲಿ ದೈನಂದಿನ ಪೂಜೆ, ಉತ್ಸವ, ಜಾತ್ರೆ ಸಂದರ್ಭದಲ್ಲಿ ಸಂಗೀತ ಸೇವೆ ಮಾಡುವ ಸಂಪ್ರದಾಯವಿದೆ. ಸಂಗೀತ ನಿತ್ಯನೂತನವಾಗಿದ್ದು ಸಂಗೀತ ಕಲೆಗೆ ಸಾವಿಲ್ಲ. ಅದು ಅವಿನಾಶಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದಲ್ಲಿ ಮಣಿಕೃಷ್ಣ ಸ್ವಾಮಿ ಅಕಾಡೆಮಿ ಆಶ್ರಯದಲ್ಲಿ ಭಾನುವಾರ ಯುವ ಕಲಾಮಣಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಭಾರತೀಯ ಶಾಸ್ತ್ರೀಯ ಸಂಗೀತಕ್ಕೆ ವಿದೇಶಗಳಲ್ಲಿಯೂ ವಿಶೇಷ ಗೌರವ, ಪ್ರೋತ್ಸಾಹ ಸಿಗುತ್ತದೆ.

ಯುವ ಜನತೆ ಹಾಗೂ ಎಳೆಯ ಮಕ್ಕಳು ಕೂಡಾ ಇಂದು ಆಸಕ್ತಿಯಿಂದ ಸಂಗೀತ ಅಭ್ಯಾಸ ಮಾಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಬಾಲ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುರತ್ಕಲ್‍ನ ಶ್ರೇಯಾ ಕೊಳತ್ತಾಯರಿಗೆ ಯುವ ಕಲಾಮಣಿ ಪ್ರಶಸ್ತಿ, ಸುನಾದಕೃಷ್ಣ ಅಮೈ ರಿಗೆ ಮಣಿ ಮತ್ತು ಎಂ.ಕೆ. ವಾರ್ಷಿಕ ಪ್ರಶಸ್ತಿ, ನಾಗೇಶ್ ಬಪ್ಪನಾಡು ಅವರಿಗೆ ಎ.ಈಶ್ವರಯ್ಯ ಸಂಸ್ಮರಣಾ ಪ್ರಶಸ್ತಿ, ಮತ್ತು ಉಡುಪಿಯ ಕೆ.ಯು. ರಾಘವೇಂದ್ರ ರಾವ್ ಅವರಿಗೆ ಹಿರಿಯ ಸಾಧಕ ಸನ್ಮಾನ ಪುರಸ್ಕಾರವನ್ನು ಧರ್ಮಾಧಿಕಾರಿಗಳು ನೀಡಿ ಗೌರವಿಸಿದರು.

ಮಣಿಕೃಷ್ಣ ಸ್ವಾಮಿ ಅಕಾಡಮಿಯ ಅಧ್ಯಕ್ಷ ಗಣೇಶ್ ಕಾರ್ಣಿಕ್ ಸ್ವಾಗತಿಸಿದರು. ಕಾರ್ಯದರ್ಶಿ ನಿತ್ಯಾನಂದ ರಾವ್ ಧನ್ಯವಾದವಿತ್ತರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!