ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುಂಡದಬೆಟ್ಟು ಲಾರಿ ಬೈಕ್ ಡಿಕ್ಕಿ ಬೈಕ್ ಸವಾರ ಸಾವು.

ಕುಂಡದಬೆಟ್ಟು ಲಾರಿ ಬೈಕ್ ಡಿಕ್ಕಿ ಬೈಕ್ ಸವಾರ ಸಾವು.

ಬೆಳ್ತಂಗಡಿ; ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡದಬೆಟ್ಟು ಎಂಬಲ್ಲಿ ಬೈಕ್ ಹಾಗೂ ನೀರು ಸಾಗಿಸುವ ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನ್ನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತ ಯುವಕ ಗೋಳಿಯಂಗಡಿ ನಿವಾಸಿ ಸಾಧಿಕ್ ಎಂದು ತಿಳಿದುಬಂದಿದೆ

 

ಕುಂಡದಬೆಟ್ಟು ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಅದಕ್ಕೆ ನೀರು ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಮತ್ತು ಸಾದಿಕ್ ಚಲಾಯಿಸಿಕೊಂಡು ಬರುತ್ತಿದ್ದ ದ್ವಿ ಚಕ್ರ ವಾಹನ ಪರಸ್ಪರ ಡಿಕ್ಕಿ ಹೊಡೆದು ಸಾದಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮೂಡಬಿದ್ರೆ ಆಸ್ಪತ್ರೆಗೆ ಸಾಗಿಸಿದರೂ ಗಂಭೀರ ಗಾಯಗೊಂಡ ಅವರು ಅಸುನೀಗಿದರು.

ಸಾದಿಕ್ ಅವರು ಗೋಳಿಯಂಗಡಿ ಮಸೀದಿ ಪಕ್ಕದ ನಿವಾಸಿ ಇಬ್ರಾಹಿಂ ‌ ಎಂಬವರ ಪುತ್ರ ಎಂದು ತಿಳಿದುಬಂದಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!