ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ: ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ

ಧರ್ಮಸ್ಥಳ: ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ

ಧರ್ಮಸ್ಥಳ: ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಂತೆ ಆಯೋಜಿಸಲಾದ 18 ನೇ ವರ್ಷದ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಣಾ ಸಮಾರಂಭ ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ನಡೆಯಿತು.

ಖ್ಯಾತ ಚಲನಚಿತ್ರ ನಟ, ಭರತನಾಟ್ಯ ಕಲಾವಿದ ಬೆಂಗಳೂರಿನ ಡಾ. ಶ್ರೀಧರ್ ಪುರಸ್ಕಾರ ನೀಡಿ ವಿಜೇತರನ್ನು ಗೌರವಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರಿನ ಚಿತ್ರ ಕಲಾವಿದ ಬಾಗೂರು ಮಾರ್ಕಂಡೇಯ ಅವರಿಂದ ಕುಂಚ-ಗಾನ-ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ - ಹೀಗೆ ನಾಲ್ಕು ಪ್ರತ್ಯೇಕ ವಿಭಾಗಗಳ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಶಾಂತಿವನ ಟ್ರಸ್ಟ್ ನ‌ ಟ್ರಸ್ಟಿ ಹೇಮಾವತಿ ವೀ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಡಾ. ಐ. ಶಶಿಕಾಂತ್ ಜೈನ್ ಸ್ವಾಗತಿಸಿದರು. ಬಿ. ಸೀತರಾಮ ತೋಳ್ಪಾಡಿತ್ತಾಯ ವಂದಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!