ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ

ಧರ್ಮಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ

ಧರ್ಮಸ್ಥಳ: ಉಪಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ ನೀಡಿದರು.

ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಸಮಾಲೋಚಿಸಿ, ಆಶೀರ್ವಾದ ಪಡೆದರು.

ಕ್ಷೇತ್ರದ ಪರವಾಗಿ ಸಚಿವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರ. ಕಾರ್ಯದರ್ಶಿ ಶ್ರೀನಿವಾಸ ರಾವ್, ಪ್ರಮುಖರಾದ ರತ್ನವರ್ಮ ಜೈನ್ ಮೊದಲಾದವರು ಇದ್ದರು.

ಬೆಳ್ತಂಗಡಿ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಡಾ‌.ಹೆಗ್ಗಡೆಯವರ ಅಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಕಚೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್, ದೇವಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಸ್ವಾಗತಿಸಿದರು.

ಕ್ಷೇತ್ರದ ವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರು ಹರ್ಷೇಂದ್ರ ಕುಮಾರ್ ಉಪಸ್ಥಿತಿಯಲ್ಲಿ ಸಚಿವರನ್ನು ಗೌರವಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!