ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಂದೆ ಚಲಾಯಿಸುತ್ತಿದ ಲಾರಿಯಡಿ ಸಿಲುಕಿ ಉಜಿರೆಯ ಬಾಲಕ ದಾರುಣ ಸಾವು

ತಂದೆ ಚಲಾಯಿಸುತ್ತಿದ ಲಾರಿಯಡಿ ಸಿಲುಕಿ ಉಜಿರೆಯ ಬಾಲಕ ದಾರುಣ ಸಾವು

ಬೆಳ್ತಂಗಡಿ: ತಂದೆ ಚಲಾಯಿಸುತಿದ್ದ ಲಾರಿಯಡಿಗೆ ಆಕಸ್ಮಿಕವಾಗಿ ಸಿಲುಕಿ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ.ಉಜಿರೆ ಸಮೀಪದ ಅತ್ತಾಜೆ‌ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ , ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ‌ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (8) ಎಂಬ ಬಾಲಕ ತನ್ನ ತಂದೆ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ದಾರುಣವಾಗಿ ಮೃತಪಟ್ಟ ಬಾಲಕನಾಗಿದ್ದಾನೆ. ಉಜಿರೆ ಅತ್ತಾಜೆ ಇಬ್ರಾಹಿಂ ಮತ್ತು ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ‌ ಮೊದಲನೆಯವನಾಗಿದ್ದ ಬಾಲಕ ಮುರ್ಷಿದ್ ತನ್ನ ತಂದೆಯ ಜೊತೆಗೆ ಮೂಡಬಿದ್ರೆಯ ಕಲ್ಲಿನ‌ಕೋರೆಗೆ ಹೋಗುವಾಗ ಬಾಲಕನೂ ಜೊತೆಗೆ ತೆರಳಿದ್ದನೆಂದು ಹೇಳಲಾಗಿದೆ. 

ತಂದೆಯೇ ಚಾಲಕನಾಗಿ ಲಾರಿ ಚಲಾಯಿಸಿದ ವೇಳೆ ಬಾಲಕ ಆಕಸ್ಮಿಕವಾಗಿ ಅದರ ಚಕ್ರದಡಿ ಸಿಲುಕಿದ್ದಾನೆ ತಕ್ಷಣ ಮೂಡಬಿದ್ರೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಬಾಲಕ ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ.ನಂತರ ಅಲ್ಲೇ ಮರಣೊತ್ತರ ಪರೀಕ್ಷೆ ನಡೆಸಿ ಉಜಿರೆ ಮಸೀದಿಯ ದಫನ‌ ಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!