ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನೆಲ್ಯಾಡಿ ಲಾರಿ ಬಸ್ಸ್ ಡಿಕ್ಕಿ ಚಾಲಕ ಸಜೀವ ದಹನ

ನೆಲ್ಯಾಡಿ ಲಾರಿ ಬಸ್ಸ್ ಡಿಕ್ಕಿ ಚಾಲಕ ಸಜೀವ ದಹನ

ನೆಲ್ಯಾಡಿ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಕಂಟೈನರ್ ಲಾರಿ ಮತ್ತು ಖಾಸಗಿ ಬಸ್ಸು ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿ ಲಾರಿ ಚಾಲಕ ಲಾರಿಯಿಂದ ಹೊರಬರಲಾಗದೇ ಸಜೀವ ದಹನಗೊಂಡ ಘಟನೆ ಮಾ.24 ತಡರಾತ್ರಿ ಸಂಭವಿಸಿದೆ.

ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ಸು ಮತ್ತು ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಮುಖಾಮುಖಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯವನ್ನರಿತು ಕೆಳಗಿಳಿದು ಪಾರಾಗಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿದ್ದು, ಲಾರಿ ಚಾಲಕ ಮಾತ್ರ ಲಾರಿಯೊಳಗೆ ಸಿಲುಕಿ ಹೊರಬರಲಾಗದೆ ಸಜೀವ ದಹನವಾಗಿರುವುದಾಗಿ ಮಾಹಿತಿ ಲಭಿಸಿದೆ.

ಬಸ್​ನಲ್ಲಿ ತುಳು ಚಿತ್ರದ ಖ್ಯಾತ ನಟಿ ನೀಮಾರೇ ಸಹ ಇದ್ದು, ಅವರು ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ

.

ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!