ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಏಳು ತಿಂಗಳ ಗರ್ಭಿಣಿ ದುಬೈನಲ್ಲಿ ಕೊರೋನಾಗೆ ಬಲಿ

ಏಳು ತಿಂಗಳ ಗರ್ಭಿಣಿ ದುಬೈನಲ್ಲಿ ಕೊರೋನಾಗೆ ಬಲಿ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿನಿ, ಪ್ರಸ್ತುತ ದುಬೈಯಲ್ಲಿ ವಾಸವಾಗಿದ್ದ ಶ್ರೇಯಾ ರೈ ಕೋವಿಡ್–19 ಹಾಗೂ ನ್ಯುಮೋನಿಯಾದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಶ್ರೇಯಾ ರೈ 7 ತಿಂಗಳ ಗರ್ಭಿಣಿಯಾಗಿದ್ದರು. ಕೆಲ ದಿನಗಳ ಹಿಂದೆ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ದುಬೈನ ಖ್ಯಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೂಲತಃ ಚಿಕ್ಕಮಗಳೂರು ಕಳಸದವರಾಗಿರುವ ಶ್ರೇಯಾ, ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ.ಧ.ಮಂ. ಕಾಲೇಜಿನಲ್ಲಿ ಪೂರೈಸಿದ್ದಾರೆ. ಪಡುಬಿದ್ರಿ ಮೂಲದ ಪವನ್ ಶೆಟ್ಟಿ‌ ಅವರನ್ನು ಮದುವೆಯಾದ ಬಳಿಕ ಶ್ರೇಯಾ ಅವರು ಪತಿಯೊಂದಿಗೆ ದುಬೈಯಲ್ಲಿ ವಾಸವಾಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!