ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪತ್ರಕರ್ತ ಪ್ರದೀಶ್ .ಎಚ್. ಮರೋಡಿ ಅವರಿಗೆ ಪ.ಗೋ. ಪ್ರಶಸ್ತಿ

ಪತ್ರಕರ್ತ ಪ್ರದೀಶ್ .ಎಚ್. ಮರೋಡಿ ಅವರಿಗೆ ಪ.ಗೋ. ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2020ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಪ್ರಜಾವಾಣಿ ದಿನ ಪತ್ರಿಕೆಯ ಮಂಗಳೂರಿನ ವರದಿಗಾರ ಪ್ರದೀಶ್. ಎಚ್.ಮರೋಡಿ ಆಯ್ಕೆಯಾಗಿದ್ದಾರೆ.

2020ರ ಜೂನ್ 25ರಂದು ಪ್ರಜಾವಾಣಿ ದಿನ ಪತ್ರಿಕೆಯಲ್ಲಿ ಪ್ರಕಟವಾದ ಪತ್ರಕರ್ತ ಪ್ರದೀಶ್ .ಎಚ್.ಮರೋಡಿ ಅವರ ‘ಕೇಳುತ್ತಿಲ್ಲ ಮಲೆಯ ಮಕ್ಕಳ ಅಳಲು ‘ಎಂಬ ವರದಿಯು ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ಆಯ್ಕೆಯಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ, ಸಂಶೋಧಕರು ಹಾಗೂ ಪುತ್ತೂರು ಡಾ.ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ. ಸುಂದರ ಕೇನಾಜೆ, ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ. ಕಿಕ್ಕೇರಿ ನೇತೃತ್ವದ ಆಯ್ಕೆ ಸಮಿತಿಯು ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದೆ.

ಪ.ಗೋ.ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 30ರಂದು ಬೆಳಗ್ಗೆ 11:00ಕ್ಕೆ ಮಂಗಳೂರು ಪತ್ರಿಕಾ ಭವನದ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರ. ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!