ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ 13 ಕೊರೊನಾ ಸೋಂಕಿತರು ಸಾವು

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ 13 ಕೊರೊನಾ ಸೋಂಕಿತರು ಸಾವು

ಮಹಾರಾಷ್ಟ್ರ: ಮೊನ್ನೆಯಷ್ಟೇ ನಾಶಿಕ್ ನಲ್ಲಿ ಆಕ್ಸಿಜನ್ ಸೋರಿಕೆಯಿಂದ 24 ರೋಗಿಗಳು ಮೃತ ಪಟ್ಟ ನೆನಪು ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅವಘಡ ಮುಂಬಾಯಿಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ 13 ಮಂದಿ ಸಾವನ್ನಪ್ಪಿದ ಘಟನೆ ಮುಂಬಾಯಿಯ ಪಾಲ್ಘರ್ ಜಿಲ್ಲೆಯ ವಿರಾರ್ ನ ವಿಜಯ್ ವಲ್ಲಭ್ ಆಸ್ಪತ್ರೆ ಯಲ್ಲಿ ನಡೆದಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 13 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಹೆಚ್ಚಿನ ಸಾವು ನೋವುಗಳ ಮಾಹಿತಿ ಇನ್ನು ತಿಳಿದುಬರಬೇಕಾಗಿದೆ.

ಈಗಾಗಲೇ ಕೊರೊನಾದಿಂದ ತತ್ತರಿಸುತ್ತಿರುವ ಜನತೆಗೆ ಆಸ್ಪತ್ರೆಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಮತ್ತಷ್ಟೂ ಆತಂಕಕ್ಕೆ ಒಳಗಾಗುವಂತೆ ಮಾಡುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!