ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಜ್ಯ ಹೆದ್ದಾರಿ ಅಗಲೀಕರಣ ಎ15 ಮತ್ತು 17 ರಂದು ವಿದ್ಯುತ್ ವ್ಯತ್ಯಯ

ರಾಜ್ಯ ಹೆದ್ದಾರಿ ಅಗಲೀಕರಣ ಎ15 ಮತ್ತು 17 ರಂದು ವಿದ್ಯುತ್ ವ್ಯತ್ಯಯ

ಬೆಳ್ತಂಗಡಿ: ವೇಣೂರು - ಮೂಡಬಿದ್ರೆ ರಾಜ್ಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ಲೈನುಗಳನ್ನು ಸ್ಥಳಾಂತರಿಸಲಿರುವ ಹಿನ್ನೆಲೆಯಲ್ಲಿ ಎಪ್ರಿಲ್ 15 ಗುರುವಾರ ಹಾಗೂ ಎಪ್ರಿಲ್ 17 ಶನಿವಾರದಂದು 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ವೇಣೂರು ಹಾಗೂ ಆರಂಬೋಡಿ ಫೀಡರುಗಳಲ್ಲಿ ಮತ್ತು 33 /11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

ಅದೇ ರೀತಿ ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಎಪ್ರಿಲ್ 15 ಗುರುವಾರದಂದು 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!