ಪ್ರಧಾನಿ ನರೇಂದ್ರ ಮೋದಿ ಈದಿನ ವಿವಿಧ ಫಾರ್ಮಾ ಕಂಪನಿ ಮುಖ್ಯಸ್ಥರೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಹತ್ವದ ಚರ್ಚೆ ನಡೆಸಿದ್ದು, ಇದರ ಬೆನ್ನಲ್ಲೇ ಈ ಮಹತ್ವದ ಆದೇಶ ಹೊರಬಿದ್ದಿದೆ. ದೇಶದಲ್ಲಿ ಪ್ರತಿದಿನ ಎರಡು ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ದಾಖಲಾಗುತ್ತಿರುವ ಕಾರಣ ಇದೀಗ ಲಸಿಕಾ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದ್ದು, ಇಲ್ಲಿಯವರೆಗೂ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ವ್ಯಾಕ್ಸಿನ್ ನೀಡಲಾಗುತ್ತಿತ್ತು.
ಉಚಿತ ಅಥವಾ ಹಣ ನೀಡಬೇಕೆ18ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಅದಕ್ಕಾಗಿ ಆದಷ್ಟು ಬೇಗ ಕಾರ್ಯಸೂಚಿಯನ್ನು ಹೊರ ತರುವ ಸಾಧ್ಯತೆ ಇದೆ. ವ್ಯಾಕ್ಸಿನ್ ಪಡೆದುಕೊಳ್ಳುವವರು ಹಣ ಸಂದಾಯ ಮಾಡಬೇಕೆ? ಅಥವಾ ಉಚಿತವಾಗಿ ನೀಡಲಾಗುವುದೇ? ಎಂಬ ಪ್ರಶ್ನೆ ಇದೀಗ ಉದ್ಭವವಾಗಿದೆ.
ಸದ್ಯ ದೇಶದಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ವ್ಯಾಕ್ಸಿನ್ ಡೋಸ್ ಉಚಿತವಾಗಿ ನೀಡಲಾಗುತ್ತಿದ್ದು, ಇದೀಗ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.