ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಭೇಟಿ ನೀಡಿ, ಸಮಾಲೋಚನೆ ನಡೆಸಿ, ಆಶೀರ್ವಾದ ಪಡೆದರು.
ಕ್ಷೇತ್ರದ ಪರವಾಗಿ ಸಚಿವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ, ದೇವಳ ಕಚೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್ ಸ್ವಾಗತಿಸಿದರು.
ಬೆಳ್ತಂಗಡಿ ತಾಲೂಕು ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಬರಮಾಡಿಕೊಂಡರು.
ಬಳಿಕ ಸನ್ನಿಧಿ ಅತಿಥಿ ಗೃಹದಲ್ಲಿ ನಡೆದ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದರು.