ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಇಂದಿನಿಂದ ದೆಹಲಿಯಲ್ಲಿ‌ ಒಂದು ವಾರ ಸಂಪೂರ್ಣ ಲಾಕ್ ಡೌನ್

ಇಂದಿನಿಂದ ದೆಹಲಿಯಲ್ಲಿ‌ ಒಂದು ವಾರ ಸಂಪೂರ್ಣ ಲಾಕ್ ಡೌನ್

ದೆಹಲಿ: ರಾಜಧಾನಿ ದೆಹಲಿಯಲ್ಲಿ‌ ಕೊರೊನಾ ಎರಡನೇ ಅಲೆಯಿಂದ ಹೆಚ್ಚುತ್ತಿರುವ ಕೊರೊನಾ ಕೇಸ್​ಗಳನ್ನು ಗಮನದಲ್ಲಿಟ್ಟುಕೊಂಡು ಒಂದು ವಾರದ ಕಾಲ ಸಂಪೂರ್ಣ ಲಾಕ್​ಡೌನ್​ ವಿಧಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಸಭೆ ನಡೆಸಿದ್ದು, ಇಂದು ರಾತ್ರಿಯಿಂದ ಏಪ್ರಿಲ್ 26ರ ಮಧ್ಯರಾತ್ರಿಯವರೆಗೆ ಲಾಕ್​ಡೌನ್ ಜಾರಿ ಮಾಡಲು ನಿರ್ಧರಿಸಿದ್ದಾರೆ. ಈ ವಿಚಾರವನ್ನು ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಸಿಎಂ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

ಆಹಾರ, ವೈದ್ಯಕೀಯ ಸೇವೆಗಳು ಸೇರಿದಂತೆ ಅಗತ್ಯ ಸೇವೆಗಳು ಮುಂದುವರಿಯಲಿವೆ. ಕೇವಲ 50 ಜನರು ಮಾತ್ರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಇದಕ್ಕಾಗಿಯೇ ಪ್ರತ್ಯೇಕವಾಗಿ ಪಾಸ್‌ಗಳನ್ನು ನೀಡಲಾಗುತ್ತದೆ. ವಿವರವಾದ ಆದೇಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!