ಇಲ್ಲಿನ ಪೆದ್ದಪಾರುಪುಡಿ ಮಂಡಲದ ಚಿನ್ನಪಾರುಪುಡಿ ಪ್ರಾಥಮಿಕ ಶಾಲೆಯ ಶಿಕ್ಷಕಿ . ಮಾಸಿಮುಕ್ಕು ಶ್ರೀದೇವಿ (54) ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಶಿಕ್ಷಕಿಯಾಗಿದ್ದಾರೆ. ಶಿಕ್ಷಕಿ ಕುಸಿದು ಬೀಳುತ್ತಿದ್ದಂತೆ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಅವಾಗಲೇ ಶಿಕ್ಷಕಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಧೃಢಪಡಿಸಿದ್ದಾರೆ.
ಶಿಕ್ಷಕರ ಸಂಘದ ಮುಖಂಡರು ಮತ್ತು ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮೃತ ಶಿಕ್ಷಕಿಗೆ ಸಂತಾಪ ಸೂಚಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.