ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಚಿನ್ನಾಭರಣ ಕಳವು ಪ್ರಕರಣ ಆರೋಪಿಗಳ ಬಂಧನ, ಚಿನ್ನ ಹಾಗೂ ವಾಹನ ವಶ

ಧರ್ಮಸ್ಥಳ ಚಿನ್ನಾಭರಣ ಕಳವು ಪ್ರಕರಣ ಆರೋಪಿಗಳ ಬಂಧನ, ಚಿನ್ನ ಹಾಗೂ ವಾಹನ ವಶ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯೊಬ್ಬರ ಬ್ಯಾಗನ್ನು ಕಳವು ಮಾಡಿ ಅದರಲ್ಲಿದ್ದ ಚಿನ್ನವನ್ನು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ.

ಕಳೆದ ಎ 01 ಉತ್ತರಕನ್ನಡ ಜಿಲ್ಲೆ ಶಿರಸಿಯ ಚಿಪಗಿ ಎಂಬಲ್ಲಿಯ ಕಲ್ಪನಾ ಎಂಬವರು ಕುಟುಂಬಿಕರೊಂದಿಗೆ ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಸಂದರ್ಭದಲ್ಲಿ ಅವರ ತಾಯಿ ಭವಾನಿ ಹಿಡಿದುಕೊಂಡಿದ್ದ ವ್ಯಾನಿಟಿ ಬ್ಯಾಗ್ ಹಾಗೂ ಅದರಲ್ಲಿದ್ದ ಸುಮಾರು 3,20,000 ಮೌಲ್ಯದ 85 ಗ್ರಾಂ ಚಿನ್ನ ಕಳ್ಳತನವಾಗಿತ್ತು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಪ್ರಕರಣವನ್ನು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವನೆ ನಿರ್ದೆಶನದಂತೆ, ಬಂಟ್ವಾಳ ಡಿವೈಎಸ್ ಪಿ ವೆಲೈಂಟಿನ್ ಡಿ ಸೋಜಾ ಸೂಚನೆಯಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿ.‌ಜಿ. ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪಿ.ಎಸ್. ಐ ಪವನ್ ನಾಯಕ್ ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಗದಗ ಜಿಲ್ಲೆ ಅಸುಂಡಿ ಗ್ರಾಮದ ನಿವಾಸಿಗಳಾದ ಸಿದ್ಧಾರ್ಥ, ಹಾಗೂ ದಾಕ್ಷಾಯಿಣಿ ಎಂದು ತಿಳಿದು ಬಂದಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರು ಸಹಿತ 85 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!