ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮೂಹಿಕ ವಿವಾಹ ಕಾರ್ಯಕ್ರಮ ರದ್ದು

ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮೂಹಿಕ ವಿವಾಹ ಕಾರ್ಯಕ್ರಮ ರದ್ದು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎ 29 ರಂದು ಸಾಮಾಹಿಕ ವಿವಾಹ ಕಾರ್ಯಕ್ರಮವನ್ನು ವ್ಯವಸ್ಥೆಗೊಳಿಸಲಾಗಿದ್ದು, ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಸರಕಾರದ ಆದೇಶದಂತೆ ಈ ಕಾರ್ಯಕ್ರಮವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಎಂದು ಧರ್ಮಸ್ಥಳದ ಧರ್ಮಾಧಿಕಾರಿಗಳ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಮತ್ತಿತ್ಯಾದಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಯ ಕಾರ್ಯಕರ್ತರ ಮುಖೇನ ವಧುವಿನ ಮನೆಗೆ ಮುಟ್ಟಿಸಲಾಗುವುದು.

ಧರ್ಮಸ್ಥಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ಊರ ದೇವರ ಅಥವಾ ಕುಲದೇವರ ಸ್ಥಾನಗಳಲ್ಲಿ ಶಾಸ್ತ್ರೋಕ್ತವಾಗಿ ದಿನಾಂಕ 29.4.2021ರಂದು ನಿಗದಿತವಾಗಿರುವ ಗೋಧೋಳಿ ಲಗ್ನದಲ್ಲಿ ಯಾ ತಮಗೆ ಅನುಕೂಲವಾದ ದಿನಾಂಕ ಮತ್ತು ಮುಹೂರ್ತದಲ್ಲಿ ಮದುವೆ ಮಾಡಿಕೊಳ್ಳುವರೇ ಸೂಚಿಸಿದೆ. ಮದುವೆಯನ್ನು ಸರಳವಾಗಿಯೂ, ಸರಕಾರದ ಕೋವಿಡ್ ಶರತ್ತುಬದ್ಧ ನಿಯಮಾವಳಿಯಂತೆ ಆಚರಿಸಿಕೊಳ್ಳುವರೇ ಸೂಚಿಸಿದೆ. ಮದುವೆಯ ಸಂದರ್ಭ ಯೋಜನೆಯ ಕಾರ್ಯಕರ್ತರೋರ್ವರು ಹಾಜರಿರುವರು. ನಂತರ ಕಾನೂನಿನಂತೆ ವಿವಾಹ ನೋಂದಣೆಯನ್ನು ತಾಲ್ಲೂಕಿನ ಉಪನೋಂದಾವಣಾಧಿಕಾರಿಯವರಲ್ಲಿ ಮಾಡಿಕೊಳ್ಳುವರೇ ಸೂಚಿಸಿದೆ. ತದನಂತರ ವಿವಾಹ ನೋಂದಣಿ ದಾಖಲಾತಿ ಪತ್ರದ ಝೆರಾಕ್ಸ್ ಪ್ರತಿಯನ್ನು ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಅರ್ಪಿಸಲು ಕ್ಷೇತ್ರಕ್ಕೆ ಕಳುಹಿಸಿಕೊಡುವ ಬಗ್ಗೆ ಸೂಚಿಸಿದೆ.

ಎಲ್ಲಾ ನೂತನ ವಧು-ವರರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವನ್ನು ಕೋರುತ್ತಾ, ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ತಮ್ಮ ಆಶೀರ್ವಾದಗಳನ್ನು ಸೂಚಿಸಿರುತ್ತಾರೆ.ಎಂದು ವೀರೂ ಶೆಟ್ಟಿ ತಿಳಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!