ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ

ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಏ.30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.

ಗರ್ಭಿಣಿ ಮಹಿಳೆಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತೆ ಧೃಷ್ಟಿಯಿಂದ ಮನೆಯಿಂದಲೇ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ‌ ಕರ್ತವ್ಯ ನಿರ್ವಹಿಸುವಂತೆ ಅವಕಾಶ ಕಲ್ಪಿಸಲಾಗಿದೆ.

ಕೊರೊನಾ ಒಂದನೇ ಅಲೆಯ ಸಂದರ್ಭದಲ್ಲಿ 300 ಕ್ಕೂ ಅಧಿಕ ‌ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿತ್ತು. ಇದಕ್ಕಾಗಿ ಈ ಅವಕಾಶ ನೀಡಲಾಗಿದೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!