ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸ್ನಾನಕ್ಕೆಂದು ನದಿಗೆ ಇಳಿದ ಯುವಕರಿಬ್ಬರು ನೀರಲ್ಲಿ ಮುಳುಗಿ ಸಾವು

ಸ್ನಾನಕ್ಕೆಂದು ನದಿಗೆ ಇಳಿದ ಯುವಕರಿಬ್ಬರು ನೀರಲ್ಲಿ ಮುಳುಗಿ ಸಾವು

ಕಡಬ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ.

ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(20) ಹಾಗೂ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್ ಎಂದು ಗುರುತಿಸಲಾಗಿದೆ. ಮೃತ ಯುವಕರು ಸ್ನಾನಕ್ಕೆಂದು ಇಚ್ಲಂಪಾಡಿ ಸೇತುವೆ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ಸ್ಥಳೀಯರು ನೀರಿಗಿಳಿದು ಇಬ್ಬರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!