ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುಜರಾತ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ 16 ಮಂದಿ ಸಾವು

ಗುಜರಾತ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ 16 ಮಂದಿ ಸಾವು

ಗುಜರಾತ್‌: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ 16 ಮಂದಿ ಸಾವನ್ನಪ್ಪಿದ ಘಟನೆ ಗುಜರಾತ್ ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ. ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 12 ರೋಗಿಗಳು ಸೇರಿ 16 ಮಂದಿ ಮೃತಪಟ್ಟಿರುವ ಬಗ್ಗೆ ತಿಳಿದು ಬಂದಿದೆ.

ಗುಜರಾತ್‌ ನ ಭರೂಚ್‌ ಜಿಲ್ಲೆಯ ಪಟೇಲ್ ವೆಲ್ಫೇರ್​ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಘಟನೆಯಲ್ಲಿ ಹಲವರು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿಅನಾಹುತ ಸಂಭವಿಸಿರಬಹುದು ಎಂದು ತಿಳಿದುಬಂದಿದ್ದು , ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!