ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾವೂರು ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಕೀಲರಾಗಿದ್ದ ರಮೇಶ್ ಪಿ.ಎನ್ ಅವರು ಕೊರೊನಾ ಸೋಂಕಿಗೆ ಬಲಿ

ನಾವೂರು ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಕೀಲರಾಗಿದ್ದ ರಮೇಶ್ ಪಿ.ಎನ್ ಅವರು ಕೊರೊನಾ ಸೋಂಕಿಗೆ ಬಲಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ವಕೀಲರಾಗಿದ್ದ ರಮೇಶ್ ಪಿ.ಎನ್ (48) ಅವರು ಕೊರೊನಾ ಸೋಂಕಿನಿಂದ ಮೇ.17 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ವಕೀಲ ವೃತ್ತಿಯನ್ನು ನಡೆಸುತ್ತಿದ್ದ ರಮೇಶ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು ಜತೆಗೆ ಕೊರೋನಾ ಪಾಸಿಟಿವ್ ಆಗಿದ್ದು, ಊರಿಗೆ ಬಂದಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೇ.17 ರಂದು ಮೃತಪಟ್ಟಿದ್ದಾರೆ.

ರಮೇಶ್ ಅವರು ಉಜಿರೆ ಎಸ್ ಡಿ ಎಂ ಕಾಲೇಜಿನ ಹಳೇ ವಿದ್ಯಾರ್ಥಿಯಾಗಿದ್ದು, ಕರಾಟೆ ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು, ಸಹೋದರ, ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!