ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತೆಕ್ಕಾರು ವಿದ್ಯುತ್ ಶಾಕ್ ಹೊಡೆದು ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು

ತೆಕ್ಕಾರು ವಿದ್ಯುತ್ ಶಾಕ್ ಹೊಡೆದು ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು

ತೆಕ್ಕಾರು: ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮೆಸ್ಕಾಂ ಪವರ್ ಮ್ಯಾನ್ ವಿದ್ಯುತ್ ಶಾಕ್ ಗೊಳಗಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ತವ್ಯ ನಿರತ ಕಲ್ಲೇರಿ ಸೆಕ್ಷನ್ ಆಫೀಸಿನ ಮೆಸ್ಕಾಂ ಪವರ್ ಮ್ಯಾನ್ ವಿಕಾಸ್ ಎಂಬವರು ಮೃತಪಟ್ಟವರು.ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಈ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭಿಸಿದೆ. ಕಳೆದ ಎರಡು ದಿನದಿಂದ ಭಾರಿ ಗಾಳಿ ಮಳೆ ಸುರಿದ ಕಾರಣ ವಿದ್ಯುತ್ ಅಡಚಣೆ ಉಂಟಾಗಿತ್ತು.

ವಿದ್ಯುತ್ ಸರಬರಾಜು ಸರಿಪಡಿಸುವ ಸಂದರ್ಭದಲ್ಲಿ ಈ ದುರ್ಘಟನೆ‌ ಸಂಭವಿಸಿದ್ದು ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ‌ ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!