Home › ಧರ್ಮಸ್ಥಳ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರನ್ ಆತ್ಮಹತ್ಯೆ: ಮೇ ಮಾಸಾಂತ್ಯಕ್ಕೆ ನಿವೃತ್ತಿ ಹೊಂದಲಿದ್ದರು: 'ಅಟಲ್ ಜಿ' ಸಭಾಭವನದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಧರ್ಮಸ್ಥಳ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರನ್ ಆತ್ಮಹತ್ಯೆ: ಮೇ ಮಾಸಾಂತ್ಯಕ್ಕೆ ನಿವೃತ್ತಿ ಹೊಂದಲಿದ್ದರು: 'ಅಟಲ್ ಜಿ' ಸಭಾಭವನದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ONLINE PUDU / Monday, May 03, 2021
ಧರ್ಮಸ್ಥಳ: ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಡಿ( 60)ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.3ರಂದು ಮಧ್ಯಾಹ್ನ ನಡೆದಿದೆ.
ಇವರು ಇಂದು ಬೆಳಿಗ್ಗೆ 7.30 ರ ವೇಳೆ ಕಚೇರಿಗೆ ಬಂದು ಸ್ವಲ್ಪ ಕೆಲಸ ಮಾಡಿದ್ದರು. ಅದರೆ ಮಧ್ಯಾಹ್ನ ಸಂಘದ ಅಟಲ್ ಜಿ ಸಭಾಭವನದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ತಿಂಗಳ ಕೊನೆಗೆ ನಿವೃತ್ತಿಯಾಗುವವರಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.