ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಾಸಕ ಹರೀಶ್ ಪೂಂಜ ಅವರಿಂದ ಯೋಗ ಪ್ರಾತ್ಯಕ್ಷಿಕೆ: ಯುವ ಮೋರ್ಚಾದಿಂದ ತಾಲೂಕಿನ 9 ಕಡೆ ಸಾಂಕೇತಿಕ ಯೋಗ ದಿನಾಚರಣೆ:  ಬೆಳ್ತಂಗಡಿಯಲ್ಲಿ ಬಿಜೆಪಿ ಮಂಡಲ, ಯುವ ಮೋರ್ಚಾದಿಂದ ಸರಳವಾಗಿ ವಿಶ್ವ ಯೋಗ ದಿನಾಚರಣೆ

ಶಾಸಕ ಹರೀಶ್ ಪೂಂಜ ಅವರಿಂದ ಯೋಗ ಪ್ರಾತ್ಯಕ್ಷಿಕೆ: ಯುವ ಮೋರ್ಚಾದಿಂದ ತಾಲೂಕಿನ 9 ಕಡೆ ಸಾಂಕೇತಿಕ ಯೋಗ ದಿನಾಚರಣೆ:  ಬೆಳ್ತಂಗಡಿಯಲ್ಲಿ ಬಿಜೆಪಿ ಮಂಡಲ, ಯುವ ಮೋರ್ಚಾದಿಂದ ಸರಳವಾಗಿ ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲ ಹಾಗೂ ಮಂಡಲ ಯುವ ಮೋರ್ಚಾ ವತಿಯಿಂದ ಸೋಮವಾರ ಬೆಳ್ತಂಗಡಿಯ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ಕಲಾಭವನದ ಪಿನಾಕಿ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಕೋವಿಡ್-19 ನಿಮಯಾನುಸಾರ ಸಾಂಕೇತಿಕವಾಗಿ ಸರಳವಾಗಿ ಆಚರಿಸಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಯೋಗ ಪ್ರಾತ್ಯಾಕ್ಷಿಕೆಯಲ್ಲಿ ಪಾಲ್ಗೊಂಡು ಯೋಗಾಸನ ಮಾಡಿದರು.

ಬೆಳ್ತಂಗಡಿ ಮಂಡಲ ಯುವಮೋರ್ಚಾದ ವತಿಯಿಂದ ತಾಲೂಕಿನ ಒಂಬತ್ತು ಕಡೆಗಳಲ್ಲಿ ಸಾಂಕೇತಿಕವಾಗಿ ಯೋಗ ದಿನಾಚರಣೆಯನ್ನು ಆಚರಿಸಿದರು. ಬೆಳ್ತಂಗಡಿಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಯೋಗ ಶಿಕ್ಷಕ ನರೇಶ್ ಮೇಲಂತಬೆಟ್ಟು ನಡೆಸಿಕೊಟ್ಟರು.

ಶಾಸಕ ಹರೀಶ್ ಪೂಂಜ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಯಶವಂತ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪಟ್ಟಣ ಪಂಚಾಯಿತಿ ಸದಸ್ಯ ಶರತ್ ಶೆಟ್ಟಿ, ಲಾಯಿಲ ಪಂಚಾಯಿತಿ ಉಪಾಧ್ಯಕ್ಷ ಗಣೇಶ್ ಲಾಯಿಲ, ಸದಸ್ಯ ಅರವಿಂದ ಶೆಟ್ಟಿ ಮೊದಲಾದವರು ಇದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!