ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ವಿಸ್ತೃತ ಗ್ರಂಥಾಲಯ ವಿಭಾಗ ಉದ್ಘಾಟನೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ವಿಸ್ತೃತ ಗ್ರಂಥಾಲಯ ವಿಭಾಗ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯವನ್ನು ಮಂಜೂಷಾ ವಸ್ತು ಸಂಗ್ರಹಾಲಯದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು ಮಂಗಳವಾರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ‌ ವೀ. ಹೆಗ್ಗಡೆಯವರು ಉದ್ಘಾಟಿಸಿದರು.

ಗ್ರಂಥಾಲಯದಲ್ಲಿ 4,707 ತಾಡೋಲೆ ಹಸ್ತಪ್ರತಿಗಳು, 1468 ಕಾಗದ ಹಸ್ತಪ್ರತಿಗಳು,302 ಕಲ್ಲಚ್ಚಿನ ಪ್ರತಿಗಳು ಹಾಗೂ 25,637 ಮುದ್ರಿತ ಪುಸ್ತಕಗಳ ಅಮೂಲ್ಯ ಸಂಗ್ರಹವಿದೆ. ಕನ್ನಡ, ಇಂಗ್ಲಿಷ್, ಸಂಸ್ಕೃತ, ತುಳು, ಮರಾಠಿ, ತೆಲುಗು, ಪ್ರಾಕೃತ ಹಾಗೂ ಪಾಲಿ ಭಾಷೆಯಲ್ಲಿ ರಚಿಸಿದ ಅನೇಕ ಕೃತಿಗಳಿವೆ. ವಿವಿಧ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಸಂಶೋಧಕರು ಅಧ್ಯಯನ ಮತ್ತು ಸಂಶೋಧನೆಗೆ ಈ ಗ್ರಂಥಾಲಯದ ಸದುಪಯೋಗ ಪಡೆಯುತ್ತಾರೆ.

ಖ್ಯಾತ ಇತಿಹಾಸ ತಜ್ಞ ಮಂಡ್ಯದ ಪ್ರೊ. ಎಚ್.ವಿ. ನರಸಿಂಹಮೂರ್ತಿ ಅವರು ಇತಿಹಾಸ ಮತ್ತು ಸಂಶೋಧನೆಗೆ ಸಂಬಂಧಿಸಿದ ಒಂದು ಸಾವಿರ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಮೈಸೂರಿನ ಸಮುದಾಯ ಅಧ್ಯಯನ ಕೇಂದ್ರ ಪ್ರಣತಾ ಅವರು 29 ಅಮೂಲ್ಯ ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡಿರುತ್ತಾರೆ.

ಧಮಸ್ಥಳದ ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಅಮಿತ್, ಶ್ರದ್ಧಾ ಅಮಿತ್, ಮಾನ್ಯ, ಡಾ. ಬಿ. ಯಶೋವರ್ಮ, ಸೋನಿಯಾವರ್ಮ, ಡಿ. ಶ್ರೇಯಸ್ ಕುಮಾರ್, ಡಿ. ನಿಶ್ಚಲ್ ಕುಮಾರ್,., ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಸಂಶೋಧನಾ ಕೇಂದ್ರದ ಡಾ. ವಿಘ್ನರಾಜ ಎಸ್.ಆರ್. ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!