ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾರು ಅಪಘಾತ ಯುವ ಕಾಂಗ್ರೆಸ್ ಮುಖಂಡನಿಗೆ ಗಾಯ

ಕಾರು ಅಪಘಾತ ಯುವ ಕಾಂಗ್ರೆಸ್ ಮುಖಂಡನಿಗೆ ಗಾಯ

ಬೆಳ್ತಂಗಡಿ: ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಅವರಿಗೆ ಗಾಯವಾದ ಘಟನೆ ನಿನ್ನೆ ರಾತ್ರಿ ಕುತ್ರೊಟ್ಟು ಎಂಬಲ್ಲಿ ನಡೆದಿದೆ.ಇವರು ನಿನ್ನೆ ರಾತ್ರಿ ತುರ್ತು ಕಾರ್ಯನಿಮಿತ್ತ ಬೆಳ್ತಂಗಡಿಗೆ ಬಂದ್ದು ಮನೆಗೆ ಹಿಂದಿರುಗುತ್ತಿರುವ ಸಂದರ್ಭ ತಾನು‌ ಚಲಾಯಿಸುತ್ತಿದ್ದ ಪಜಿರೋ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಭಿನಂದನ್ ಅವರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದ ತಕ್ಷಣ ಸ್ಥಳೀಯ ನಿವಾಸಿ ಸಂತೋಷ್ ಹೊಳ್ಳ ಅವರು ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಅವರಿಗೆ ಮಾಹಿತಿ ನೀಡಿದ್ದು, ತಕ್ಷಣ ಆಗಮಿಸಿದ ಅವರು ಮತ್ತು ಸಂಗಡಿಗರಾದ ಇಂಟಕ್ ಅಧ್ಯಕ್ಷ ನವೀನ್ ಗೌಡ , ರಾಜೇಶ್ ಭಟ್ , ಧನುಷ್ ಸೇರಿ ಅಭಿನಂದನ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆಂದು ಗೊತ್ತಾಗಿದೆ. ಅದೃಷ್ಟವಶಾತ್ ಹೆಚ್ಚಿನ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!