ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಸನ ಕೆಂಚಟ್ಟಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಬೆಳ್ತಂಗಡಿಯ ಸಹೋದರರು ಸೇರಿ ಮೂವರ ದುರ್ಮರಣ

ಹಾಸನ ಕೆಂಚಟ್ಟಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಬೆಳ್ತಂಗಡಿಯ ಸಹೋದರರು ಸೇರಿ ಮೂವರ ದುರ್ಮರಣ

ಹಾಸನ: ಕಾರೊಂದು ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿರುವ ಘಟನೆ ಹಾಸನದ ಹೊರವಲಯದ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಸಮೀಪದ ಯೋಗೀಶ್ ಮತ್ತು ಜಯಪ್ರಕಾಶ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ.

ಕೆಂಚಟ್ಟಹಳ್ಳಿ ಬಳಿ ರಸ್ತೆಗೆ ಹಾಕಲಾಗಿದ್ದ ಹಂಪ್ಸ್ ಹತ್ತಿರ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಿಡಿದಾಗ ಹಿಂಬದಿಯಿಂದ ರಭಸವಾಗಿ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಕಾರು ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟರೇ ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಕಡೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಹಾಸನ ಸಂಚಾರಿ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಲಾರಿ ಚಾಲಕ ಹಾಗೂ ಅಪಘಾತಕ್ಕೆ ಒಳಗಾದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!