ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜುಲೈ 05 ರಿಂದ ರಾತ್ರಿ 9 ಗಂಟೆಯವರೆಗೆ ಎಲ್ಲದ್ದಕ್ಕೂ ಅವಕಾಶ: ರಾಜ್ಯದಲ್ಲಿ ಇಲ್ಲ ವೀಕೆಂಡ್ ಕರ್ಫ್ಯೂ: ದ.ಕ ಜಿಲ್ಲೆಗೆ ಬಂದಿಲ್ಲ ಅಧಿಕೃತ ಆದೇಶ

ಜುಲೈ 05 ರಿಂದ ರಾತ್ರಿ 9 ಗಂಟೆಯವರೆಗೆ ಎಲ್ಲದ್ದಕ್ಕೂ ಅವಕಾಶ: ರಾಜ್ಯದಲ್ಲಿ ಇಲ್ಲ ವೀಕೆಂಡ್ ಕರ್ಫ್ಯೂ: ದ.ಕ ಜಿಲ್ಲೆಗೆ ಬಂದಿಲ್ಲ ಅಧಿಕೃತ ಆದೇಶ

 

 

 

 

 

 

 

ಬೆಂಗಳೂರು: ರಾಜ್ಯದಲ್ಲಿ ಜುಲೈ 5ರಿಂದ ಅನ್ವಯವಾಗುವಂತೆ ಅನ್​ಲಾಕ್​​ 3.0 ಜಾರಿಗೆ ಅನುಮತಿಸಲಾಗಿದೆ. ಪ್ರಾರ್ಥನಾ ಮಂದಿರಗಳು, ಮಾರುಕಟ್ಟೆ, ಮಾಲ್, ಬಾರ್​​ಗಳನ್ನು ತೆರೆಯಲು ಅವಕಾಶ ದೊರೆತಿದೆ.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರಕ್ಕೆ ತತ್ತರಿಸಿ ಲಾಕ್​​ಡೌನ್​​ ಜಾರಿಗೊಳಿಸಿದ್ದ ರಾಜ್ಯ ಸರ್ಕಾರ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದ್ದಂತೆ ಹಂತ ಹಂತವಾಗಿ ಅನ್​​ಲಾಕ್ ಪ್ರಕ್ರಿಯೆ ಕೈಗೆತ್ತಿಕೊಂಡಿದೆ. ಸದ್ಯ ಜಾರಿಯಲ್ಲಿರುವ ಅನ್​​ಲಾಕ್ 2.0 ಜುಲೈ 5ರ ಮುಂಜಾನೆ 6 ಗಂಟೆಗೆ ಅಂತ್ಯವಾಗಲಿದ್ದು, ಅನ್​​ಲಾಕ್ 3.0 ಜಾರಿಗೆ ಬರಲಿದೆ. ಅನ್‌ಲಾಕ್‌ 3.0 ಕುರಿತಂತೆ ಸಿಎಂ ಬಿ ಎಸ್‌ ಯಡಿಯೂರಪ್ಪ ಮಾಹಿತಿ ನೀಡಿರುವುದು.

ಯಾವುದಕ್ಕೆ ಸಡಿಲಿಕೆ:
  • ಮಾಲ್​ಗಳನ್ನು ತೆರೆಯಲು ಅವಕಾಶ.
  • ಸರ್ಕಾರಿ/ಖಾಸಗಿ ಕಚೇರಿಗಳು, ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ.
  • ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ, ಸೇವೆಗಳಿಗೆ ಅವಕಾಶ ಇಲ್ಲ.
  • ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ.
  • ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ.
  • ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ.
  • ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ.
  • ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ.
  • ನೈಟ್ ಕರ್ಫ್ಯೂ ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ.
  • ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಸಭೆ-ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
  • ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನ.
  • ಪಬ್​ಗ​ಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ.
  • ಬಾರ್​ಗಳು ಕಾರ್ಯನಿರ್ವಹಿಸಲು ಅವಕಾಶ.
  • ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
ಅವಶ್ಯವಿದ್ದಲ್ಲಿ ಹೆಚ್ಚಿನ ನಿರ್ಬಂಧ ಹೇರಲು ಜಿಲ್ಲಾಡಳಿಕ್ಕೆ ಸೂಚನೆ. ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಿಎಂ ಬಿಎಸ್​ವೈ ವಿನಂತಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!