ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೋವಿಡ್ ನಿಂದ ಮೃತಪಟ್ಟ ರೈತರ 1 ಲಕ್ಷ ರೂ. ಸಾಲ ಮನ್ನಾ: ಸಚಿವ ಎಸ್.ಟಿ. ಸೋಮಶೇಖರ್

ಕೋವಿಡ್ ನಿಂದ ಮೃತಪಟ್ಟ ರೈತರ 1 ಲಕ್ಷ ರೂ. ಸಾಲ ಮನ್ನಾ: ಸಚಿವ ಎಸ್.ಟಿ. ಸೋಮಶೇಖರ್

ಮಂಗಳೂರು: ಕೋವಿಡ್ ನಿಂದ ಮೃತ ಪಟ್ಟ ರೈತರ 1 ಲಕ್ಷ ರೂ ಸಾಲ ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಸಚಿವರು, ಕೋವಿಡ್​ನಿಂದ ಮೃತಪಟ್ಟ ರೈತರ ಸಾಲದ ಮೊತ್ತದ ರೂ 1 ಲಕ್ಷ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದಾರೆ.

ರಾಜ್ಯದಲ್ಲಿ ಸುಮಾರು 10,187 ರೈತರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಅವರ 79, 47 ಕೋಟಿ ರೂ ಸಾಲ ಮನ್ನಾ ಮಾಡಲು ಮುಂದಿನ 3-4 ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಅಪೆಕ್ಸ್​, ಡಿಸಿಸಿ ಬ್ಯಾಂಕ್​ & ಪ್ಯಾಕ್ಸ್​ಗಳಲ್ಲಿ ಸಾಲ ಪಡೆದ ರೈತರಿಗೆ ಇದು ಅನ್ವಯವಾಗಲಿದೆ ಎಂದಿದ್ದಾರೆ. ಈ ಬಗ್ಗೆ ಬ್ಯಾಂಕ್​ಗಳ ಎಂಡಿಗಳೊಂದಿಗೆ ಸದ್ಯದಲ್ಲೇ ಸಭೆ ನಡೆಸಲಾಗುವುದು.

ಈಗಾಗಲೇ ಕೋವಿಡ್​ನಿಂದ ಮೃತಪಟ್ಟ ಬಿಪಿಎಲ್ ಕಾರ್ಡ್ ಹೊಂದಿರುವ ವಯಸ್ಕರ ಕುಟುಂಬಕ್ಕೆ 1 ಲಕ್ಷ ರೂ. ನೀಡಲಾಗುವುದು ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ ಎಂದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!