ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ: ಶೃಂಗೇರಿಯ ಮೆಣಸೆಯಲ್ಲಿ 6 ವರ್ಷಗಳ ಹಿಂದೆ ನಡೆದಿದ್ದ ಘಟನೆ

ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ: ಶೃಂಗೇರಿಯ ಮೆಣಸೆಯಲ್ಲಿ 6 ವರ್ಷಗಳ ಹಿಂದೆ ನಡೆದಿದ್ದ ಘಟನೆ

ಶೃಂಗೇರಿ: ಬ್ಯೂಟಿ ಪಾರ್ಲರ್ ಯುವತಿಯ ಮೇಲೆ ನಡೆದಿದ್ದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಚಿಕ್ಕಮಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಶೃಂಗೇರಿಯ ಮೆಣಸೆಯಲ್ಲಿ 6 ವರ್ಷಗಳ ಹಿಂದೆ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಯುವತಿ ಕೆಲಸ ಮುಗಿಸಿಕೊಂಡು ಬರುತ್ತಿದ್ದ ಸಮಯದಲ್ಲಿ ಆಕೆಯ ಮೇಲೆ ಆ್ಯಸಿಡ್​ ದಾಳಿ ನಡೆದಿತ್ತು. ಅಪರಾಧಿ ಗಣೇಶ್ ಎಂಬುವನು ಯುವತಿಯನ್ನು ಮದುವೆಯಾಗುಂತೆ ಪೀಡಿಸುತ್ತಿದ್ದನು. ಆದರೆ ಯುವತಿ ಒಪ್ಪದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಪೂರ್ವ ನಿಯೋಜಿತವಾಗಿ ಆ್ಯಸಿಡ್ ದಾಳಿ ಮಾಡಿರುವುದು ಎಂಬುದು ಸಾಬೀತಾಗಿದೆ.

ಕಳೆದ ಆರು ವರ್ಷಗಳಿಂದ ಸುದೀರ್ಘ ವಿಚಾರಣೆಯಲ್ಲಿದ್ದ ಪ್ರಕರಣಕ್ಕೆ ಇಂದು 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಅಪರಾಧಿಗಳಾದ ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬುವವರಿಗೆ ಜೀವಾವಧಿ ಶಿಕ್ಷೆ ಹಾಗೂ 20 ಲಕ್ಷ ರೂ. ದಂಡ ವಿಧಿಸಿದೆ. ಚಿಕ್ಕಮಗಳೂರಿನ 2 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ ಸಂಗ್ರೇಶಿ ಈ ಮಹತ್ವದ ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!