ಗ್ರಾ.ಪಂ. ಅಧ್ಯಕ್ಷೆ ಆಶಾ ಬೆನಡಿಕ್ಟ ಸಲ್ದಾನ ಅವರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿಶೇಷ ಮುತುವರ್ಜಿಯಿಂದ ಈ ಕಿಟ್ ವಿತರಣೆಯಾಗುತಿದ್ದು ಪಂಚಾಯತ್ ವತಿಯಿಂದ ಅವರಿಗೆ ಅಭಿನಂದನೆಗಳು ಎಂದರು.
ಗ್ರಾ.ಪಂ. ಕಾರ್ಯದರ್ಶಿ ಪುಟ್ಟಸ್ವಾಮಿ ಸ್ವಾಗತಿಸಿ ಕಟ್ಟಡ ಕಾರ್ಮಿಕ ಇಲಾಖೆಯಿಂದ ಫಲಾನುಭವಿಗಳಿಗೆ ಸಿಗುವ ಸವಲತ್ತುಗಳ ಮಾಹಿತಿಯನ್ನು ನೀಡಿದರು . ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಆರ್. ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾಂಕೇತಿಕವಾಗಿ ನಡೆದ ಕಾರ್ಯಕ್ರಮದ ನಂತರ ಎಲ್ಲಾ ಕಾರ್ಮಿಕರಿಗೆ ಕರ್ನೊಡಿ ಶಾಲೆಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಕಿಟ್ ವಿತರಿಸಲಾಯಿತು.