ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮುಂಡಾಜೆ ಹೆದ್ದಾರಿಗೆ ಮರ ಉರುಳಿ ಬಿದ್ದು ಸಂಚಾರ, ವಿದ್ಯುತ್ ಪೂರೈಕೆ ವ್ಯತ್ಯಯ

ಮುಂಡಾಜೆ ಹೆದ್ದಾರಿಗೆ ಮರ ಉರುಳಿ ಬಿದ್ದು ಸಂಚಾರ, ವಿದ್ಯುತ್ ಪೂರೈಕೆ ವ್ಯತ್ಯಯ

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಕಾಪು ಸಮೀಪ, ಬುಧವಾರ ಸಂಜೆ ಗಾಳಿ ಮಳೆಗೆ ದೊಡ್ಡ ಮರವೊಂದು ವಿದ್ಯುತ್ ಲೈನ್ ಹಾಗೂ ರಸ್ತೆಗೆ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರ ಹಾಗೂ ವಿದ್ಯುತ್ ಪೂರೈಕೆಗೆ ಅಡಚಣೆ ಉಂಟಾಯಿತು.

ಕಕ್ಕಿಂಜೆಯಿಂದ ಮುಂಡಾಜೆಗೆ ವಿದ್ಯುತ್ ಪೂರೈಸುವ 11 ಕೆವಿ ಲೈನ್ ನ ಎರಡು ಕಂಬಗಳು ಮುರಿದು ಬಿದ್ದಿವೆ. ಇದರಿಂದ ಹಲವು ಕಡೆಗಳಲ್ಲಿ‌ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಮರ ಹೆದ್ದಾರಿಗೆ ಉರುಳಿ ಬಿದ್ದ ಕಾರಣ ಒಂದು ಗಂಟೆಯಷ್ಟು ಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.

ಸ್ಥಳೀಯರು,ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!