ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಜೀವ್​ ಗಾಂಧಿ ಖೇಲ್ ರತ್ನ ಪ್ರಶಸ್ತಿ ಇನ್ನು ಮುಂದೆ 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ': ಪ್ರಧಾನಿ ನರೇಂದ್ರ ಮೋದಿ ಘೋಷಣೆ

ರಾಜೀವ್​ ಗಾಂಧಿ ಖೇಲ್ ರತ್ನ ಪ್ರಶಸ್ತಿ ಇನ್ನು ಮುಂದೆ 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ': ಪ್ರಧಾನಿ ನರೇಂದ್ರ ಮೋದಿ ಘೋಷಣೆ

ನವದೆಹಲಿ: 'ರಾಜೀವ್​ ಗಾಂಧಿ ಖೇಲ್ ರತ್ನ ಪ್ರಶಸ್ತಿ'ಯನ್ನು 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ' ಎಂದು ಇನ್ನು ಮುಂದೆ ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

https://twitter.com/narendramodi/status/1423538297842769921?s=20

"ಭಾರತದಾದ್ಯಂತ ಅನೇಕ ನಾಗರಿಕರು ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡಲು ಮನವಿ ಮಾಡುತ್ತಾ ಬಂದಿದ್ದು, ಅವರ ಅಭಿಪ್ರಾಯಗಳಿಗಾಗಿ ನಾನು ಧನ್ಯವಾದಗಳನ್ನ ಅರ್ಪಿಸುತ್ತೇನೆ. ಅವರ ಭಾವನೆಗಳನ್ನು ಗೌರವಿಸಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ" ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಹಾಕಿಪಟು ಮೇಜರ್ ಧ್ಯಾನ್ ಚಂದ್ ಅವರು ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿ ಒಬ್ಬರು, ಅವರು ಭಾರತಕ್ಕೆ ಗೌರವ ಮತ್ತು ಹೆಮ್ಮೆಯನ್ನು ತಂದಿದ್ದರು. ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಅವರ ಹೆಸರನ್ನು ಇಡುವುದು ಸೂಕ್ತ ಎಂದು ಪ್ರಧಾನಿ ತಿಳಿಸಿದ್ದಾರೆ.

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಇನ್ನು ಮುಂದೆ ಮೇಜರ್ ದ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ದೇಶ ಕಂಡ ಅಪ್ರತಿಮ ಕ್ರೀಡಾಪಟುವಿಗೆ ಸಂದ ಈ ಅರ್ಹ ಗೌರವ ನಾವೆಲ್ಲರೂ ಹೆಮ್ಮೆ ಪಡುವಂತದ್ದು. ಎಂದು ಶಾಸಕ ಹರೀಶ್ ಪೂಂಜ ಸಂತಸ ಹಂಚಿಕೊಂಡ್ದಿದಾರೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!