ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿಯ ಸಂಸ್ಕಾರಯುತ ಸೇವೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರಣ: ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ

ಬಿಜೆಪಿಯ ಸಂಸ್ಕಾರಯುತ ಸೇವೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರಣ: ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ

 

 

 

ಬೆಳ್ತಂಗಡಿ:ದೇಶ ಮತ್ತು ಸಂಸ್ಕೃತಿಗಳ ಬಗ್ಗೆ ಹೋರಾಟದ ಫಲವಾಗಿ ಬಿಜೆಪಿ ಇಂದು ಬೆಳೆದಿದೆ. ಹೋರಾಟ, ಸಂಘಟನೆ, ಆಡಳಿತ ಮತ್ತು ಸೇವೆಯ ಪರಿಣಾಮ ರಾಷ್ಟದಲ್ಲಿ ಆಡಳಿತ ನಡೆಸುವ ಶಕ್ತಿ ಪಡೆದಿದೆ. ಎಂದು ಬಿಜೆಪಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ ಹೇಳಿದರು ಅವರು ಗುರುವಾಯನಕೆರೆ ಹವ್ಯಕ ಭವನದಲ್ಲಿ ಬುಧವಾರ ನಡೆದ ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಮಾತನಾಡಿದರು. ಬಿಜೆಪಿಯ ಈ ಸಂಸ್ಕಾರಯುತ ಸೇವೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವೇ ಕಾರಣವಾಗಿದೆ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಮಾತನಾಡಿ ಬಿಜೆಪಿ ಕಾರ್ಯಕರ್ತ ಕೇವಲ ಒಬ್ಬ ರಾಜಕೀಯ ಪಕ್ಷದ ಕಾರ್ಯಕರ್ತ ಅಲ್ಲ. ದೇಶದ ಜವಾಬ್ದಾರಿ ತನ್ನ ಹೆಗಲ ಮೇಲಿದೆ ಎಂದು ತಿಳಿದು ರಾಷ್ಟನಿರ್ಮಾಣದ ಕೆಲಸವನ್ನು ಮಾಡುವುದು ಕರ್ತವ್ಯ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿ ಸುಧೀರ್ ಶೆಟ್ಟಿ ಕಣ್ಣೂರು ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು ಸ್ವಾಗತಿಸಿ, ಕಾರ್ಯದರ್ಶಿ ಸೆಲೆಸ್ಟಿನ್ ಡಿಸೋಜಾ ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತು ಸಹಕಾರ ಭಾರತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!