ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರೈತರ ಪಂಪ್‌ ಸೆಟ್‌ಗಳಿಗೆ ಮೀಟರ್‌ ಅಳವಡಿಸುವ ಚಿಂತನೆ ಇಲ್ಲ. ಇದು ಕೇವಲ ವಂದತಿ : ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

ರೈತರ ಪಂಪ್‌ ಸೆಟ್‌ಗಳಿಗೆ ಮೀಟರ್‌ ಅಳವಡಿಸುವ ಚಿಂತನೆ ಇಲ್ಲ. ಇದು ಕೇವಲ ವಂದತಿ : ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುವ ಚಿಂತನೆ ಇಲ್ಲ.  ವದಂತಿಯನ್ನು ರೈತರು ನಂಬ ಬಾರದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಕಚೇರಿಯಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸೌರ ವಿದ್ಯುತ್ ಯೋಜನೆಗಳಲ್ಲಿ ಈ ಹಿಂದಿನ ಹಗರಣ ತನಿಖೆ ನಡೆಸಬೇಕೆಂಬ ಈ‌ ಹಿಂದೆ ನಾನು ಮಾಡಿದ್ದ ಒತ್ತಾಯಕ್ಕೆ ಈಗಲೂ ಬದ್ಧನಾಗಿದ್ದೇನೆ. ಇಲಾಖೆಯಲ್ಲಿ ಮುಂಚೆ ಆಗಿರುವ ತಪ್ಪುಗಳನ್ನು ಸರಿಪಡಿಸಿ, ಸುಧಾರಣೆ ತರುವುದು ನಮ್ಮ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆಯುತ್ತೇನೆ. ಲೋಪದೋಷಗಳೇನಾದರು ಆಗಿದ್ದರೆ ತನಿಖೆಗೆ ಸಿದ್ಧನಿದ್ದೇನೆ ಎಂದರು.

ರೈತರ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸುವ ಯಾವುದೇ ಚಿಂತನೆ ಇಲ್ಲ. ಈ ಸಂಬಂಧ ಇರುವ ಊಹಾಪೋಹಗಳಿಗೆ ರೈತರು ಕಿವಿಗೊಡಬಾರದು. ಇಲಾಖೆಯನ್ನು ಜನ ಸ್ನೇಹಿಯಾಗಿಸುವುದು ನಮ್ಮ ಮುಂದಿರುವ ಸವಾಲಾಗಿದೆ. ರೈತರಿಗೆ ನಿರಂತರ ವಿದ್ಯುತ್ ಪೂರೈಸಲು ಎಲ್ಲಾ ಯತ್ನ ಮಾಡಲಾಗುವುದು. ಇಲಾಖೆಯಲ್ಲಿನ ಎಲ್ಲಾ ಹಂತಗಳಲ್ಲಿ ಸುಧಾರಣೆ ತಂದು, ಇಲಾಖೆಯನ್ನು ಕ್ರಿಯಾಶೀಲಗೊಳಿಸಲಾಗುವುದು ಎಂದು ತಿಳಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!